ನಾಳೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ನೂತನ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆಸಲು ಶಿಫಾರಸು ಮಂಡನೆ?
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಾಳೆ ನಡೆಯಲಿದ್ದು ಅದರಲ್ಲಿ ಪಕ್ಷದ ನೂತನ ಅಧ್ಯಕ್ಷರ ನೇಮಕ ವಿಚಾರವನ್ನು ಉನ್ನತ ನಾಯಕರು ಪ್ರಸ್ತಾಪಿಸಲಿದ್ದು, ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ.
Published: 21st January 2021 08:08 AM | Last Updated: 21st January 2021 12:44 PM | A+A A-

ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಾಳೆ ನಡೆಯಲಿದ್ದು ಅದರಲ್ಲಿ ಪಕ್ಷದ ನೂತನ ಅಧ್ಯಕ್ಷರ ನೇಮಕ ವಿಚಾರವನ್ನು ಉನ್ನತ ನಾಯಕರು ಪ್ರಸ್ತಾಪಿಸಲಿದ್ದು, ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ.
ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸುವ ಸಂಬಂಧ ಮತ್ತು ಎಐಸಿಸಿ ಅಧಿವೇಶನ ನಡೆಸಲು ದಿನಾಂಕ ನಿಗದಿಮಾಡುವ ಸಂಬಂಧ ಚರ್ಚೆ ನಡೆಸಿ ಅಂತಿಮಗೊಳಿಸಬೇಕೆಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಚರ್ಚೆ ನಡೆಸುವ ಸಾಧ್ಯತೆಯಿದೆ.
ಅದಾದ ಬಳಿಕ ಕಾಂಗ್ರೆಸ್ ನ ಅಧ್ಯಕ್ಷ ಹುದ್ದೆ ಚುನಾವಣೆಗೆ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ವರದಿ ಸಲ್ಲಿಸಿ ಶಿಫಾರಸು ಮಂಡಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ನಾಳೆಯ ಸಭೆಯ ವಿವರಗಳನ್ನು ನೀಡಿವೆ.
ಕಳೆದ ಮೇ 2019ರ ಲೋಕಸಭಾ ಚುನಾವಣೆ ನಂತರ ಪಕ್ಷದ ಹೀನಾಯ ಸೋಲಿನ ಕಾರಣ ನೀಡಿ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಸೋನಿಯಾ ಗಾಂಧಿ ಮಧ್ಯಂತರ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡರು.
ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ನ ಪ್ರಾಬಲ್ಯ ದೇಶಾದ್ಯಂತ ಕುಗ್ಗಿದ್ದು, ಪಕ್ಷವನ್ನು ಆಮೂಲಾಗ್ರವಾಗಿ ಪುನರ್ರಚಿಸಿ ಸಂಘಟಿಸಲು ನೂತನ ಪೂರ್ಣಾವಧಿ ಬಲಿಷ್ಠ ನಾಯಕತ್ವದ ಅಗತ್ಯವಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಕಳೆದ ವರ್ಷ ಹೇಳಿದ್ದರು. ಈ ಸಂಬಂಧ ಹೈಕಮಾಂಡ್ ಗೆ ಪತ್ರ ಕೂಡ ಬರೆದಿದ್ದರು.