ಕೋವಿಡ್-19: ದೇಶದಲ್ಲಿಂದು 15,223 ಹೊಸ ಕೇಸ್ ಪತ್ತೆ, 151 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,223 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,10,883ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 21st January 2021 10:18 AM  |   Last Updated: 21st January 2021 10:18 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,223 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,10,883ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 151 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,52,869ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,06,10,883ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 19,965 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,02,65,706ಕ್ಕೆ ಏರಿಕೆಯಾಗಿದೆ. 

ಪ್ರಸ್ತುತ ದೇಶದಲ್ಲಿ 1,92,308 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 8,03,090 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,57,65,491 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. 

ಇದರಂತೆ ಲಸಿಕೆ ಅಭಿಯಾನ ಆರಂಭವಾದ ಕಳೆದ 7 ದಿನಗಳಿಂದ ಇಲ್ಲಿಯವರೆಗೂ ಒಟ್ಟಾರೆ, 8,06,484 ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp