ಪಶ್ಚಿಮ ಬಂಗಾಳ: 'ಗೋಲಿ ಮಾರೋ' ಘೋಷಣೆ ಕೂಗಿದ್ದ 3 ಬಿಜೆಪಿ ಕಾರ್ಯಕರ್ತರ ಬಂಧನ

ಸುವೇಂದು ಅಧಿಕಾರಿ ಆಯೋಜಿಸಿದ್ದ  ರೋಡ್ ಶೋ ಕಾರ್ಯಕ್ರಮದಲ್ಲಿ ಗೋಲಿಮಾರೋ ಘೋಷಣೆ ಕೂಗಿದ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Published: 21st January 2021 02:04 PM  |   Last Updated: 21st January 2021 02:08 PM   |  A+A-


Representational imag

ಸಾಂದರ್ಭಿಕ ಚಿತ್ರ

Posted By : Shilpa D
Source : PTI

ಚಂದನ್ ನಗರ್:  ಸುವೇಂದು ಅಧಿಕಾರಿ ಆಯೋಜಿಸಿದ್ದ  ರೋಡ್ ಶೋ ಕಾರ್ಯಕ್ರಮದಲ್ಲಿ ಗೋಲಿಮಾರೋ ಘೋಷಣೆ ಕೂಗಿದ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ ಎಂಬ ಘೋಷಣೆ ಕೂಗಲಾಗಿತ್ತು, ಈ ಹಿನ್ನೆಲೆಯಲ್ಲಿ  ಹೂಗ್ಲಿ ಜಿಲ್ಲೆಯ  ಬಿಜೆಪಿ  ಯುವ ಘಟಕದ ಅಧ್ಯಕ್ಷ ಸುರೇಶ್ ಸಾಹು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬುಧವಾರ ಕೆಲವು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದರು, ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಸುಮೊಟು ಪ್ರಕರಣ ದಾಖಲಿಸಿ ತಡರಾತ್ರಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಮೂವರನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.

ಸಂಸದ ಲಾಕೆಟ್ ಚಟರ್ಜಿ ಮತ್ತು ರಾಜ್ಯಸಭಾ ಸದಸ್ಯ ಸ್ವಪನ್ ದಾಸ್‌ಗುಪ್ತಾ ಹಾಗೂ ಸುವೇಂದು ಅಧಿಕಾರಿ ರೋಡ್ ಶೋ ನಜೆಸುತ್ತಿದ್ದ ವೇಳೆ ಮೂವರು ಬಿಜೆಪಿ ಧ್ವಜ ಹಿಡಿದು ಘೋಷಣೆ ಕೂಗಿದ್ದಾರೆ.  ಬಿಜೆಪಿ ಧ್ವಜ ಹಿಡಿದು ಇಂಥಹ ಘೋಷಣೆ ಕೂಗಿದರೇ, ಅಂಥವರನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp