ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11ನೇ ಸುತ್ತಿನ ಮಾತುಕತೆ

ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇಂದು 11ನೇ ಸುತ್ತಿನ ಮಾತುಕತೆ ನಡೆಯಲಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.

Published: 22nd January 2021 10:16 AM  |   Last Updated: 22nd January 2021 12:44 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ನವದೆಹಲಿ: ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇಂದು 11ನೇ ಸುತ್ತಿನ ಮಾತುಕತೆ ನಡೆಯಲಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.

ಸರಕಾರ ಸದ್ಯ ಒಂದೂವರೆ ವರ್ಷಗಳ ಕಾಲ ಕಾಯಿದೆ ತಡೆಹಿಹಿಡಿಯಲು ಸಿದ್ದವಾಗಿದೆ ಎಂದು ಹೇಳಿದ್ದರೂ ಬಿಕ್ಕಟ್ಟು ಸುಲಭವಾಗಿ ಬಗೆಹರಿಯುತ್ತಿಲ್ಲ.

ಜನವರಿ 19 ರಂದು ನಡೆದ ಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಸರ್ಕಾರ ವಿವಾದ ಇತ್ಯರ್ಥಕ್ಕಾಗಿ ನೂತನ ಕೃಷಿ ಕಾಯ್ದೆ ಜಾರಿಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಹೇಳಿತ್ತು. ಈ ಬಗ್ಗೆ ಗುರುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲೂ ಚರ್ಚಿಸಲಾಗಿತ್ತು. 

ಸಚಿವ ನರೇಂದ್ರ ಸಿಂಗ್ ತೋಮರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕೃಷಿ ಸಚಿವರ ಪ್ರಸ್ತಾವನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ತಿರಸ್ಕರಿಸಿದೆ. ಅಂತಿಮವಾಗಿ ಪ್ರಸ್ತಾಪ ತಿರಸ್ಕರಿಸಲಾಯಿತು. ಜೊತೆಗೆ ಮೂರೂ ಕೃಷಿ ಕಾಯ್ದೆ ರದ್ದು ಮಾಡುವುದೊಂದೇ ನಮ್ಮ ಬೇಡಿಕೆ ಎಂದು ರೈತರು ಸ್ಪಷ್ಟಪಡಿಸಿದರು. ಹೀಗಾಗಿ ಕಗ್ಗಂಟು ಮತ್ತೆ ಮುಂದುವರೆದಂತೆ ಆಗಿದೆ. 

ಈ ನಡುವೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ 11ನೇ ಸುತ್ತಿನ ಮಾತುಕತೆ ನಿಗದಿ ಆಗಿದೆ. ಹೀಗಾಗಿ ಈ ಸಭೆಯ ಫಲಶೃತಿ ಬಗ್ಗೆ ಇದೀಗ ಕುತೂಹಲ ಮೂಡಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp