ರೈತರ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ: ಸೋನಿಯಾ ಗಾಂಧಿ

ರೈತರ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

Published: 22nd January 2021 01:34 PM  |   Last Updated: 22nd January 2021 02:05 PM   |  A+A-


Sonia gandhi

ಸೋನಿಯಾ ಗಾಂಧಿ

Posted By : Shilpa D
Source : PTI

ನವದೆಹಲಿ: ರೈತರ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ  ಅವರು, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್‌ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.

‘ರೈತರ ಪ‍್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್‌ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.

ಬಜೆಟ್‌ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ ಎಂದಿದ್ದಾರೆ.

ರೈತರ ಆಂದೋಲನ ಮುಂದುವರೆದಿದೆ ಮತ್ತು ಸರ್ಕಾರವು ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ, ಕೋವಿಡ್‌–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. 

ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್‌ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ ಎಂದು ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp