ಶೀಘ್ರವೇ ಮತ್ತೊಂದು ಸುತ್ತಿನ ಮಾತುಕತೆಗೆ ಭಾರತ- ಚೀನಾ ಒಪ್ಪಿಗೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಶೀಘ್ರದಲ್ಲೇ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಮಾತುಕತೆಗೆ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.

Published: 22nd January 2021 08:36 PM  |   Last Updated: 22nd January 2021 08:36 PM   |  A+A-


Casual_Image1

ಸಾಂದರ್ಭಿಕ ಚಿತ್ರ

Posted By : Nagaraja AB
Source : ANI

ನವದೆಹಲಿ: ಶೀಘ್ರದಲ್ಲೇ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಮಾತುಕತೆಗೆ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಸಭೆಗಾಗಿ  ಉಭಯ ದೇಶಗಳು ನಿಕಟ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶೀಘ್ರದಲ್ಲಿಯೇ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್ ಮಟ್ಟದ ಮಾತುಕತೆಗಾಗಿ ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ. ಈ ಸಂಬಂಧ ರಾಯಭಾರಿ ಮತ್ತು ಮಿಲಿಟರಿ ಮಾಧ್ಯಮಗಳ ಮೂಲಕ ನಿಕಟ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು. 

ಚೀನಾ ಸೇನಾ ಕಾರ್ಯಾಚರಣೆಯಿಂದಾಗಿ ಪೂರ್ವ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷವೇರ್ಪಟ್ಟಿದೆ.  ಡಿಸೆಂಬರ್ 18 ರಂದು ನಡೆದ ಕೊನೆಯ ಸಮಾಲೋಚನಾ ಮತ್ತು ಸಮನ್ವಯ ಸಭೆಯಲ್ಲಿ, ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದಲ್ಲಿ ನಿಕಟ ಸಮಾಲೋಚನೆ ನಡೆಸಲು ಉಭಯ ದೇಶಗಳು ಒಪ್ಪಿಕೊಂಡಿದ್ದವು.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp