ಕೋವಿಡ್-19: ದೇಶದಲ್ಲಿಂದು 14,545 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.06 ಕೋಟಿಗೆ ಏರಿಕೆ

ಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. 

Published: 22nd January 2021 09:56 AM  |   Last Updated: 22nd January 2021 12:43 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. 

ಶುಕ್ರವಾರ ದೇಶದಲ್ಲಿ 14,545 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 163 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,25,428ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,53,032ಕ್ಕೆ ತಲುಪಿದೆ.
 
ಇನ್ನು ಒಟ್ಟಾರೆ 1,06,25,428 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 18,002 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಬರೋಬ್ಬರಿ 1,02,83,708 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 

ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆ ಕಡಿಮೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,88,688ಕ್ಕೆ ಇಳಿಕೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 7,64,120 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,85,66,947 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. 

ಇದರಂತೆ ಲಸಿಕೆ ಅಭಿಯಾನ ಆರಂಭವಾದ ಕಳೆದ 7 ದಿನಗಳಿಂದ ಇಲ್ಲಿಯವರೆಗೂ ಒಟ್ಟಾರೆ, 10,43,534 ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp