ಯುಪಿಎಸ್‌ಸಿ ಪರೀಕ್ಷೆ: ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ, ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ಕೋವಿಡ್‌ 19 ಕಾರಣದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
 

Published: 22nd January 2021 02:12 PM  |   Last Updated: 22nd January 2021 02:15 PM   |  A+A-


UPSC Exams

ಸಂಗ್ರಹ ಚಿತ್ರ

Posted By : Srinivasamurthy VN
Source : The New Indian Express

ನವದೆಹಲಿ‌: ಕೋವಿಡ್‌ 19 ಕಾರಣದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತಂತೆ ನಿನ್ನೆ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಅವರು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರೈ ನೇತೃತ್ವದ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು.  

ಕೋವಿಡ್‌ 19 ಸಾಂಕ್ರಾಮಿಕದಿಂದಾಗಿ 2020ರ ಯುಪಿಎಸ್‌ಸಿ ಪರೀಕ್ಷೆ ತಪ್ಪಿಸಿಕೊಂಡ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ರಾಜು ಅವರು ಪೀಠಕ್ಕೆ ಮನವಿ ಮಾಡಿದರು. 

ಇನ್ನು ಈ ಮನವಿ ಸ್ವೀಕರಿಸಿದ ನ್ಯಾಯಾಲಯ, ಪರೀಕ್ಷೆಗೆ ಮತ್ತೊಂದು ಅವಕಾಶ ನೀಡುವಂತೆ ಕೋರಿ ನಾಗರಿಕ ಸೇವೆಗಳ ಆಕಾಕ್ಷಿ ರಚನಾ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಜ.25ಕ್ಕೆ ಮುಂದೂಡಿದೆ. ಈ ಅವಧಿಯಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಇಂಥ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಕೋವಿಡ್ ಸಾಂಕ್ರಾಮಿಕ ಮತ್ತು ದೇಶದ ಹಲವಾರು ಭಾಗಗಳಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಅಕ್ಟೋಬರ್ 4 ರಂದು ನಡೆದ ಯುಪಿಎಸ್‌ಸಿ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯನ್ನು ಮುಂದೂಡಲು ಉನ್ನತ ನ್ಯಾಯಾಲಯ ಕಳೆದ ವರ್ಷ ಸೆಪ್ಟೆಂಬರ್ 30 ರಂದು ನಿರಾಕರಿಸಿತ್ತು. ಆದಾಗ್ಯೂ, 2020 ರಲ್ಲಿ ತಮ್ಮ ಕೊನೆಯ ಪ್ರಯತ್ನ ಮುಂದುವರೆಸಿರುವ ಅಭ್ಯರ್ಥಿಗಳಿಗೆ ಹೆಚ್ಚುವರಿ ವಯೋಮಿತಿಯನ್ನು ವಿಸ್ತರಿಸುವುದರೊಂದಿಗೆ ಹೆಚ್ಚುವರಿ ಅವಕಾಶವನ್ನು ನೀಡುವುದನ್ನು ಪರಿಗಣಿಸಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಸಾರ್ವಜನಿಕ ಸೇವಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ (ಡಿಒಪಿಟಿ) ಮಾತ್ರ ಔಪಚಾರಿಕ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಲಾಗಿತ್ತು. 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp