ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗ

 ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಶುಕ್ರವಾರ ಪ್ರಕಟಿಸಿದ್ದಾರೆ. ಇಲ್ಲಿಯವರೆಗೂ ಪಂಜಾಬಿನಲ್ಲಿ 76 ರೈತರು ಮೃತಪಟ್ಟಿರುವ ಬಗ್ಗೆ ವರದಿ ಸ್ವೀಕರಿಸಿರುವುದಾಗಿ ಅವರು ಹೇಳಿದ್ದಾರೆ.

Published: 22nd January 2021 10:37 PM  |   Last Updated: 22nd January 2021 10:37 PM   |  A+A-


Farmers_Protest1

ಪ್ರತಿಭಟನಾನಿರತ ರೈತರು

Posted By : Nagaraja AB
Source : ANI

ಚಂಡೀಘಡ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಶುಕ್ರವಾರ ಪ್ರಕಟಿಸಿದ್ದಾರೆ. ಇಲ್ಲಿಯವರೆಗೂ ಪಂಜಾಬಿನಲ್ಲಿ 76 ರೈತರು ಮೃತಪಟ್ಟಿರುವ ಬಗ್ಗೆ ವರದಿ ಸ್ವೀಕರಿಸಿರುವುದಾಗಿ ಅವರು ಹೇಳಿದ್ದಾರೆ.

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಪಂಜಾಬಿನ ಎಲ್ಲಾ ರೈತರು ಕಾಳಜಿ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜಾರಿಗೆ ತರಲಾದ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಮನವೊಲಿಸಲು ಅವರು ಅಲ್ಲಿರುವುದಾಗಿ ತಿಳಿಸಿದರು.

ದೆಹಲಿ ಗಡಿಯಲ್ಲಿ ಕುಳಿತು ಅಪಾರ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮಗಾಗಿ ಪ್ರತಿಭಟನೆ ನಡೆಸುತ್ತಿಲ್ಲ. ಆದರೆ, ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ 76 ರೈತರು ಮೃತಪಟ್ಟಿದ್ದು, ಪ್ರತಿದಿನವೂ ನಮ್ಮ ರೈತರನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕೃಷಿ ಕಾನೂನುಗಳ ಹೋರಾಟದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಹೆಚ್ಚುವರಿಯಾಗಿ 5 ಲಕ್ಷ ಪರಿಹಾರ ನೀಡಲಾಗುವುದು, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಅಮರೀಂದರ್ ಸಿಂಗ್, ಫೇಸ್ ಬುಕ್ ಲೈವ್ ನಲ್ಲಿ ತಿಳಿಸಿದ್ದಾರೆ.

ಕೃಷಿ ಕಾನೂನುಗಳ ವಿಚಾರವಾಗಿ ಸುಳ್ಳು ಹರಡುತ್ತಿರುವುದಕ್ಕೆ ಶಿರೋಮಣಿ ಅಕಾಲಿ ದಳ ಮತ್ತು ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲು ನಿರಾಕರಿಸಿರುವುದು ಅಮಾನವೀಯ ಎಂದರು.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp