ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ...

Published: 22nd January 2021 03:23 PM  |   Last Updated: 22nd January 2021 03:23 PM   |  A+A-


farmers-govt

ರೈತರು - ಸರ್ಕಾರದ ಮಾತುಕತೆ

Posted By : Lingaraj Badiger
Source : PTI

ನವದೆಹಲಿ: ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ ಮಾತುಕತೆ ಆರಂಭಿಸಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.

ಕಳೆ ಬುಧವಾರ 10ನೇ ಸುತ್ತಿನ ಮಾತುಕತೆ ನಡೆದಿತ್ತು. ಈ ವೇಳೆ ಕೇಂದ್ರ ಸರ್ಕಾರ ಸದ್ಯ ಒಂದೂವರೆ ವರ್ಷಗಳ ಕಾಲ ಈ ಕೃಷಿ ಕಾಯಿದೆಗಳನ್ನು ತಡೆಹಿಹಿಡಿಯಲು ಸಿದ್ದ ಮತ್ತು ಈ ಸಂಬಂಧ ಜಂಟಿ ಸಮಿತಿ ರಚಿಸುವುದಾಗಿ ಹೇಳಿತ್ತು. ಆದರೆ ಇದಕ್ಕೆ ರೈತರು ಒಪ್ಪದ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯುತ್ತಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ 11ನೇ ಸುತ್ತಿನ ಮಾತುಕತೆ ನಡೆಯುತ್ತಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ಸಚಿವ ಸೋಮ್ ಪ್ರಕಾಶ್ ಹಾಗೂ 41 ರೈತ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಈ ಮಧ್ಯೆ, ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿರುವ ರೈತರು, ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪರೇಡ್  ನಡೆಸುವುದಾಗಿ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp