ಕೋವಿಡ್-19: ದೇಶದಲ್ಲಿಂದು 14,256 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.85 ಲಕ್ಷಕ್ಕೆ ಇಳಿಕೆ

ಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. 

Published: 23rd January 2021 10:23 AM  |   Last Updated: 23rd January 2021 10:23 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. 

ಬುಧವಾರ ದೇಶದಲ್ಲಿ 14,256 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 152 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,39,684ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,53,184ಕ್ಕೆ ತಲುಪಿದೆ. 

ಇನ್ನು ಒಟ್ಟಾರೆ 1,06,39,684 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,130 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಬರೋಬ್ಬರಿ 10,300,838 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 

ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆ ಕಡಿಮೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,85,662ಕ್ಕೆ ಇಳಿಕೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 7,64,120 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,85,66,947 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. 

ಇದರಂತೆ ಲಸಿಕೆ ಅಭಿಯಾನ ಆರಂಭವಾದ ಕಳೆದ 7 ದಿನಗಳಿಂದ ಇಲ್ಲಿಯವರೆಗೂ ಒಟ್ಟಾರೆ, 13,90,592 ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp