ಲಾಲು ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ, ದೆಹಲಿ ಏಮ್ಸ್ ಆಸ್ಪತ್ರೆಗೆ ರವಾನೆ

ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ಆರೋಗ್ಯದಲ್ಲಿ ತೀವ್ರ ಹದಗೆಟ್ಟ ಪರಿಣಾಮ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Published: 23rd January 2021 10:51 PM  |   Last Updated: 23rd January 2021 10:51 PM   |  A+A-


Lalu Prasad

ಲಾಲು ಪ್ರಸಾದ್ ಯಾದವ್

Posted By : Srinivasamurthy VN
Source : ANI

ರಾಂಚಿ: ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ಆರೋಗ್ಯದಲ್ಲಿ ತೀವ್ರ ಹದಗೆಟ್ಟ ಪರಿಣಾಮ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶ್ವಾಸಕೋಶದ ಸೋಂಕಿಗೆ ತುತ್ತಾಗಿರುವ ಅವರು ಪ್ರಸ್ತುತ ರಾಂಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಪ್ರಸಾದ್ ಅವರನ್ನು ಇದೀಗ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬಿಹಾರದ ಮೇವು ಹಗರಣ ಸಂಬಂಧ ಶಿಕ್ಷೆಗೆ ಗುರಿಯಾಗಿದ್ದಾರೆ. ಲಾಲು ಪ್ರಸಾದ್ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಅವರು ಚಿಕಿತ್ಸೆ ಪಡೆಯುತ್ತಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ಮಂಡಳಿ ದೆಹಲಿ ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ಬೆಳಗ್ಗೆ ಮಾಹಿತಿ ನೀಡಿದ್ದರು. ಅಲ್ಲದೆ ಜೈಲಧಿಕಾರಿಗಳಿಗೂ ಅವರು ಮಾಹಿತಿ ನೀಡಿದರು. ಈ ಹಿನ್ನಲೆ ಜೈಲಾಧಿಕಾರಿಗಳು ಅವರನ್ನು ದೆಹಲಿಗೆ ಶಿಫ್ಟ್​ ಮಾಡಿದ್ದಾರೆ.

ಮೂಲಗಳ ಪ್ರಕಾರ ಲಾಲು ಪ್ರಸಾದ್ ಅವರಿಗೆ ಗುರುವಾರ ಸಂಜೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು.. ಶುಕ್ರವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರ ಮಗ ತೇಜಸ್ವಿ ಯಾದವ್​ ಈ ಕುರಿತು ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಬಳಿಕ ಮಾತನಾಡಿದ ತೇಜಸ್ವಿ ಯಾದವ್​, ಅವರಿಗೆ ನಾವು ಉತ್ತಮ ಚಿಕಿತ್ಸೆ ನೀಡಲು ಬಯಸುತ್ತಿದ್ದೇವೆ, ಆದರೆ, ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದನ್ನು ವೈದ್ಯರು ತಿಳಿಸಿಬೇಕಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದಿದ್ದರು.

ಇದೀಗ ಅವರನ್ನು ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp