ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೆ ತೆರಳಿದ ಸಿಎಂ ಮಮತಾ ಬ್ಯಾನರ್ಜಿ, ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿದ್ದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಭಾಷಣ ಮಾಡಲು ಆಗಮಿಸಿದ್ದು ಈ ವೇಳೆ ಅಲ್ಲಿದ್ದವರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ದೀದಿ ಭಾಷಣ ಮಾಡದೆ ತೆರಳಿದ್ದಾರೆ. 

Published: 23rd January 2021 06:12 PM  |   Last Updated: 23rd January 2021 06:12 PM   |  A+A-


Modi-Mamata

ಮೋದಿ-ಮಮತಾ

Posted By : Vishwanath S
Source : Online Desk

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿದ್ದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಭಾಷಣ ಮಾಡಲು ಆಗಮಿಸಿದ್ದು ಈ ವೇಳೆ ಅಲ್ಲಿದ್ದವರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ದೀದಿ ಭಾಷಣ ಮಾಡದೆ ತೆರಳಿದ್ದಾರೆ. 

ನೇತಾಜಿ ಸುಭಾಷ್ ಚಂದ್ರಬೋಸ್ ರ 125 ಜನ್ಮದಿನಾಚರಣೆಯ ಅಂಗವಾಗಿ ದೇಶಾದ್ಯಂತ ಪರಾಕ್ರಮ ದಿನ ಎಂದು ಆಚರಿಸಲಾಗುತ್ತಿದೆ. ಇನ್ನು ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 

ಈ ವೇಳೆ ಸಿಎಂ ಮಮತಾ ಬ್ಯಾನರ್ಜಿಯನ್ನು ಭಾಷಣ ಮಾಡಲು ಆಹ್ವಾನಿಸಲಾಗಿತ್ತು. ಅವರು ಮೈಕ್ ಮುಂದೆ ಬರುತ್ತಿದ್ದಂತೆ ಅಲ್ಲಿದ್ದ ಕೆಲವರು ಜೈ ಶ್ರೀರಾಮ್ ಘೋಷಣೆ ಕೂಗಿದರು. 

ಇದರಿಂದ ಬೇಸರಗೊಂಡ ಮಮತಾ ಬ್ಯಾನರ್ಜಿ ಅವರು, ನಿಮ್ಮ ವರ್ತನೆ ಖಂಡಿಸಿ ನಾನು ಭಾಷಣ ಮಾಡುವುದಿಲ್ಲ. ಭಾಷಣ ಮಾಡಲು ಕರೆಸಿ ಈ ರೀತಿ ಅಪಮಾನ ಮಾಡುವುದು ಸರಿಯಲ್ಲ. ಇದು ಸರ್ಕಾರಿ ಕಾರ್ಯಕ್ರಮ. ಯಾವುದೇ ಒಂದು ಪಕ್ಷದ ಕಾರ್ಯಕ್ರಮವನ್ನು ಎಂದು ಹೇಳಿ ನಿರ್ಗಮಿಸಿದರು.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಕುರಿತಂತೆ ಭಾಷಣ ಮಾಡುತ್ತಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp