ತೃತೀಯ ಲಿಂಗಿಗಳ ಹಕ್ಕು, ಬದುಕು ರಕ್ಷಣೆ, ಪುನರ್ವಸತಿ ರಾಜ್ಯ ಸರ್ಕಾರಗಳ ಕರ್ತವ್ಯ: ಕೇಂದ್ರ ಗೃಹ ಸಚಿವಾಲಯ ಪತ್ರ 

ತೃತೀಯ ಲಿಂಗಿಗಳ ರಕ್ಷಣೆ, ಪುನರ್ವಸತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅವರ ಅಭಿವೃದ್ಧಿಗೆ ಮುಂದಾಗಬೇಕು, ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತರಬೇಕು ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ.

Published: 23rd January 2021 11:06 AM  |   Last Updated: 23rd January 2021 12:43 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : ANI

ನವದೆಹಲಿ: ತೃತೀಯ ಲಿಂಗಿಗಳ ರಕ್ಷಣೆ, ಪುನರ್ವಸತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅವರ ಅಭಿವೃದ್ಧಿಗೆ ಮುಂದಾಗಬೇಕು, ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತರಬೇಕು ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ.

ಈ ಸಂಬಂಧ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದು ತೃತೀಯ ಲಿಂಗಿಗಳ ಹಕ್ಕುಗಳನ್ನು ರಕ್ಷಿಸುವುದು ಮಾತ್ರವಲ್ಲದೆ ಈ ನಿಟ್ಟಿನಲ್ಲಿ ಪೊಲೀಸರು ಮತ್ತು ಕೈದಿಗಳ ಅಧಿಕಾರಿಗಳನ್ನು ಹೆಚ್ಚು ಜಾಗೃತಿಗೊಳಿಸಬೇಕು ಎಂದಿದ್ದಾರೆ.

ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳು ತೆಗೆದುಕೊಳ್ಳಬೇಕಾದ ತೃತೀಯ ಲಿಂಗಿಗಳ ಕಲ್ಯಾಣ ಕ್ರಮಗಳನ್ನು, ತೃತೀಯ ಲಿಂಗಿಗಳ ರಕ್ಷಣೆ ಮತ್ತು ಪುನರ್ವಸತಿಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕಾನೂನು ಆದೇಶಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ತೃತೀಯ ಲಿಂಗಿಗಳ (ಹಕ್ಕುಗಳ ಸಂರಕ್ಷಣೆ) ಕಾಯ್ದೆ, 2019 ರ ಸೆಕ್ಷನ್ 18 ರ ಅಡಿಯಲ್ಲಿ, ಸಾರ್ವಜನಿಕ ಉದ್ದೇಶಗಳಿಗಾಗಿ ವಿಧಿಸಲಾದ ಯಾವುದೇ ಕಡ್ಡಾಯ ಸೇವೆಯನ್ನು ಹೊರತುಪಡಿಸಿ ಬಲವಂತದ ಅಥವಾ ಬಂಧಿತ ಕಾರ್ಮಿಕರ ಕೃತ್ಯದಲ್ಲಿ ಪಾಲ್ಗೊಳ್ಳಲು ಯಾರಾದರೂ ತೃತೀಯ ಲಿಂಗಿಗಳನ್ನು ಒತ್ತಾಯಿಸಿದರೆ ಅಥವಾ ಪ್ರಲೋಭನೆಗೊಳಿಸಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಸಚಿವಾಲಯ ಹೇಳಿದೆ. 

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp