ಹೌರಾದಲ್ಲಿ ಬಿಜೆಪಿ-ಟಿಎಂಸಿ ನಡುವೆ ಘರ್ಷಣೆ, ಹಲವರಿಗೆ ಗಾಯ, ಅನೇಕ ವಾಹನಗಳು ಜಖಂ
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ಅನೇಕ ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 23rd January 2021 07:31 PM | Last Updated: 23rd January 2021 07:31 PM | A+A A-

ಸಂಗ್ರಹ ಚಿತ್ರ
ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ಅನೇಕ ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗುಂಡು ಹಾರಿಸಲಾಗಿದ್ದು, ಕೆಲವರಿಗೆ ರಾಡ್ ಮತ್ತು ಕೋಲುಗಳಿಂದ ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಬೀದಿ ಜಗಳದ ಸಮಯದಲ್ಲಿ ಕಚ್ಚಾ ಬಾಂಬ್ಗಳನ್ನು ಸಹ ಎಸೆದಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ, ಕೆಲವು ಬೈಕುಗಳು ಮತ್ತು ಪೊಲೀಸ್ ವಾಹನಗಳನ್ನು ಧ್ವಂಸ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘರ್ಷಣೆ ವೇಳೆ ಗುಂಡು ಹಾರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಇದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಅಭ್ರಾ ಸೇನ್ ಸ್ಟ್ರೀಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಪಕ್ಷದ ಕಾರ್ಯಕರ್ತ ಪ್ರಮೋದ್ ದುಬೆ ಅವರನ್ನು ಹೌರಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಿಜೆಪಿ ಹೇಳಿದೆ.