ಕೋವಿಡ್-19: ದೇಶದಲ್ಲಿಂದು 14,849 ಹೊಸ ಕೇಸ್ ಪತ್ತೆ, 155 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,849 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Published: 24th January 2021 10:03 AM | Last Updated: 24th January 2021 10:03 AM | A+A A-

ಸಂಗ್ರಹ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,849 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್ 155 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,53,339ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,06,54,533 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 15,948 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,03,16,786ಕ್ಕೆ ಏರಿಕೆಯಾಗಿದೆ.
India reports 14,849 new #COVID19 cases, 15,948 discharges, and 155 deaths in last 24 hours, as per Union Health Ministry
— ANI (@ANI) January 24, 2021
Total cases: 1,06,54,533
Active cases: 1,84,408
Total discharges: 1,03,16,786
Death toll: 1,53,339
Total vaccinated: 15,82,201 pic.twitter.com/hPUdu7MIcv
ಪ್ರಸ್ತುತ ದೇಶದಲ್ಲಿ 1,84,408 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ಒಂದೇ ದಿನ 8,03,090 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,57,65,491 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾದ ಕಳೆದ 7 ದಿನಗಳಿಂದ ಇಲ್ಲಿಯವರೆಗೂ ಒಟ್ಟಾರೆ, 15,82,201 ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.