ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರ ಶ್ಲಾಘಿಸಿದ ಪ್ರಧಾನಿ ಮೋದಿ
ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ಲಾಘಿಸಿದ್ದಾರೆ.
Published: 24th January 2021 12:43 PM | Last Updated: 24th January 2021 12:43 PM | A+A A-

ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಿನ್ನೆಲೆಯಲ್ಲಿ ನಮ್ಮ ದೇಶದ ಹೆಣ್ಣು ಮಗಳ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹೆಣ್ಣು ಮಕ್ಕಳಿಗೆ ಸೆಲ್ಯೂಟ್ ಹೊಡೆಯುತ್ತೇನೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಪ್ರವೇಶ, ಉತ್ತಮ ಆರೋಗ್ಯ ಸೇವೆ ಮತ್ತು ಲಿಂಗ ತಾರತ್ಯ ಸುಧಾರಿಸುವುದು ಸೇರಿದಂತೆ ಅನೇಕ ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರನ್ನು ಶ್ಲಾಘಿಸುತ್ತೇನೆಂದು ಹೇಳಿದ್ದಾರೆ.