ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: 'ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ ಅಭಿಯಾನ'

ಜನವರಿ 24, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಹೆಣ್ಣು ಮಕ್ಕಳ ರಕ್ಷಣೆ, ಅಭಿವೃದ್ಧಿ, ಬೆಳವಣಿಗೆ ವಿಚಾರದಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಗುತ್ತಿದೆ.

Published: 24th January 2021 09:29 AM  |   Last Updated: 24th January 2021 11:43 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ನವದೆಹಲಿ: ಜನವರಿ 24, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಹೆಣ್ಣು ಮಕ್ಕಳ ರಕ್ಷಣೆ, ಅಭಿವೃದ್ಧಿ, ಬೆಳವಣಿಗೆ ವಿಚಾರದಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಗುತ್ತಿದೆ.

ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಹಾಗೂ ಸಮಾಜದಲ್ಲಿ ಅವರಿಗೆ ಸಮಾನತೆಯ ಸ್ಥಾನ ಕಲ್ಪಿಸುವ ಕುರಿತು ಅರಿವು ಬೆಳೆಸುವ ನಿಟ್ಟಿನಲ್ಲಿ ಸಂಕಲ್ಪ ಮಾಡುವ ದಿನ ಇದಾಗಿದೆ. ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ ಅಭಿಯಾನದಡಿ 2015ರಲ್ಲಿ ಎನ್ ಡಿಎ ಸರ್ಕಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆಯನ್ನು ಆರಂಭಿಸಿತು. ಇದರಿಂದ ಲಿಂಗ ತಾರತಮ್ಯ ನಿವಾರಣೆಗೆ ಅನುಕೂಲವಾಗಲಿದೆ. ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸ ತಪ್ಪಿಸಿ ಹೆಣ್ಣು ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ.

2014-15ರಲ್ಲಿ ಪ್ರತಿ ಸಾವಿರ ಬಾಲಕರಿಗೆ 918 ಬಾಲಕಿಯರ ಅನುಪಾತವಿತ್ತು. ಈ ಪ್ರಮಾಣ 2019-20ರ ವೇಳೆಗೆ ಹೆಣ್ಣು ಮಕ್ಕಳ ಅನುಪಾತ 934ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿವೆ. ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ವರ್ತನೆಯಲ್ಲೂ ಅಪಾರವಾದ ಸುಧಾರಣೆಗಳು ಇತ್ತೀಚಿನ ವರ್ಷಗಳಲ್ಲಿ ಕಂಡುಬರುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರಾಧಾನ್ಯತೆ ನೀಡಿದ್ದು, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯದ ಮೂಲಕ ಹೆಣ್ಣುಮಕ್ಕಳ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಮ್ಮ ಪಾರಂಪರಿಕ ಜ್ಞಾನವೇ ಈ ಮಾತಿನಲ್ಲಿ ಅಡಗಿದ್ದು, ಇದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ದೇಶಾದ್ಯಂತ ಪ್ರಯತ್ನಗಳು ಸಾಗಿವೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp