ತೈಲ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ
ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ.
Published: 24th January 2021 11:29 AM | Last Updated: 24th January 2021 11:29 AM | A+A A-

ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಕೇಂದ್ರ ಸರ್ಕಾರ ಹಣದುಬ್ಬರವನ್ನು ನಿಯಂತ್ರಿಸುವ ಬದಲು ಕೇಂದ್ರ ಸರ್ಕಾರ ತೆರಿಗೆ ಸಂಗ್ರಹಿಸುವ ಕಾರ್ಯದಲ್ಲಿ ಕಾರ್ಯನಿರತವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು 'ಜಿಡಿಪಿ'ಯಲ್ಲಿ ಭಾರಿ ಬೆಳವಣಿಗೆಯನ್ನು ಸಾಧಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿದ್ದಾರೆ, ಆದರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ ಎಂದು ತಿಳಿಸಿದ್ದಾರೆ.