ಕೋವಿಡ್: ದೇಶದಲ್ಲಿಂದು 13,203 ಹೊಸ ಕೇಸ್ ಪತ್ತೆ, ಚೇತರಿಕೆ ಪ್ರಮಾಣ ಶೇ.96.83ಕ್ಕೆ ಏರಿಕೆ
ದೇಶದಲ್ಲಿಂದು 13,203 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,06,67,736ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
Published: 25th January 2021 10:10 AM | Last Updated: 25th January 2021 10:14 AM | A+A A-

ಸಂಗ್ರಹ ಚಿತ್ರ
ನವದೆಹಲಿ: ದೇಶದಲ್ಲಿಂದು 13,203 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,06,67,736ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್ 131 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,53,470ಕ್ಕೆ ಏರಿಕೆಯಾಗಿದೆ.
India reports 13,203 new #COVID19 cases, 13,298 discharges and 131 deaths in last 24 hours, as per Union Health Ministry
— ANI (@ANI) January 25, 2021
Total cases: 1,06,67,736
Active cases: 1,84,182
Total discharges: 1,03,30,084
Death toll: 1,53,470
Total vaccinated: 16,15,504 pic.twitter.com/zI1T3JKx2O
ಈ ನಡುವೆ ಒಟ್ಟಾರೆ 1,06,67,736 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 13,298 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,03,30,084ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 1,84,182 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ಒಂದೇ ದಿನ 5,70,246 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 19,23,37,117 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
A total of 19,23,37,117 samples tested for #COVID19 up to 24th January. Of these, 5,70,246 samples were tested yesterday: Indian Council of Medical Research (ICMR) pic.twitter.com/G21q3t1pjG
— ANI (@ANI) January 25, 2021
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾದ ಕಳೆದ 10 ದಿನಗಳಿಂದ ಇಲ್ಲಿಯವರೆಗೂ ಒಟ್ಟಾರೆ, 16,15,504 ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.