ರಾಷ್ಟ್ರೀಯ ಮತದಾರರ ದಿನಾಚರಣೆಯು ಚುನಾವಣಾ ಆಯೋಗದ ಕೊಡುಗೆಯನ್ನು ಸ್ಮರಿಸುವ ದಿನ: ಪ್ರಧಾನಿ ಮೋದಿ

ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published: 25th January 2021 10:25 AM  |   Last Updated: 25th January 2021 12:39 PM   |  A+A-


ನರೇಂದ್ರ ಮೋದಿ

Posted By : Raghavendra Adiga
Source : PTI

ನವದೆಹಲಿ: ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ಥಾಪನಾ ದಿನವನ್ನು ಗುರುತಿಸಲು ಜನವರಿ 25ನ್ನು "ರಾಷ್ಟ್ರೀಯ ಮತದಾರರ ದಿನ" ಎಂದು ಆಚರಿಸಲಾಗುತ್ತದೆ.

"ರಾಷ್ಟ್ರೀಯ ಮತದಾರರ ದಿನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಅದ್ಭುತ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭವಾಗಿದೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. "

"ಮತದಾರರ ನೋಂದಣಿಯನ್ನು ಖಾತರಿಪಡಿಸುವ ಅಗತ್ಯತೆಯ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವ ದಿನ ಇದಾಗಿದೆ." ಪ್ರಧಾನಿ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp