ರೈತರಿಂದ ಹೊಸ ಕೃಷಿ ಕಾಯ್ದೆಗಳ ನಿರ್ನಾಮ: ಮೋದಿ ಸರ್ಕಾರದ ವಿರುದ್ಧ ಶರದ್ ಪವಾರ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಬಹುಮತದ ಬಲದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಯಾವುದೇ ಕಾನೂನನ್ನು ಜಾರಿಗೊಳಿಸಬಹುದು. ಆದರೆ ಒಮ್ಮೆ ಜನ ಸಾಮಾನ್ಯ

Published: 25th January 2021 07:28 PM  |   Last Updated: 25th January 2021 07:28 PM   |  A+A-


sharad-1

ಶರದ್ ಪವಾರ್

Posted By : Lingaraj Badiger
Source : PTI

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಬಹುಮತದ ಬಲದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಯಾವುದೇ ಕಾನೂನನ್ನು ಜಾರಿಗೊಳಿಸಬಹುದು. ಆದರೆ ಒಮ್ಮೆ ಜನ ಸಾಮಾನ್ಯ ಹಾಗೂ ರೈತರು ಎಚ್ಚೆತ್ತುಕೊಂಡರೆ ಹೊಸ ಕೃಷಿ ಕಾಯ್ದೆ ಮತ್ತು ಕೇಂದ್ರ ಸರ್ಕಾರವನ್ನು ನಿರ್ನಾಮ ಮಾಡುವವರೆಗೂ ಸುಮ್ಮನಿರುವುದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ರೈತರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಎರಡು ತಿಂಗಳಿಂದ ಕೊರೆಯುವ ಚಳಿಯನ್ನು ಲೆಕ್ಕಿಸದೇ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರ ಸ್ಥಿತಿಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ವಿಚಾರಿಸಿಲ್ಲ ಎಂದು ಶರದ್ ಪವಾರ್ ವಾಗ್ದಾಳಿ ನಡೆಸಿದರು.

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಮುಂಬೈನಲ್ಲಿ ಹಮ್ಮಿಕೊಂಡಿಕೊಂಡಿದ್ದ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, ಗೋವಾಗೆ ತೆರಳಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ರೈತರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ನಿವೇದನಾ ಪತ್ರ ಸಲ್ಲಿಸಲು ಮುಂದಾಗಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಗೋವಾಕ್ಕೆ ತೆರಳಿದ್ದಾರೆ. ಕೋಶ್ಯಾರಿ ಅವರಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಭೇಟಿ ಮಾಡಲು ಸಮಯವಿದೆ. ಆದರೆ ರೈತರಿಗಾಗಿ ಸಮಯವಿಲ್ಲ ಎಂದು ಟೀಕಿಸಿದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp