ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ದೇಶದಲ್ಲಿ ಇದೇ 16ರಿಂದ ಕೊರೊನಾ ಸೋಂಕಿನ ವಿರುದ್ಧ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದರೂ ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡುವ ಕಾಯಕದಲ್ಲಿ ದೇಶದಲ್ಲಿ ಕರ್ನಾಟಕವೇ ಮೊದಲ ಸ್ಥಾನಗಳಿಸಿದೆ.

Published: 26th January 2021 12:57 AM  |   Last Updated: 26th January 2021 01:00 AM   |  A+A-


covid vaccine news

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ನವದೆಹಲಿ: ದೇಶದಲ್ಲಿ ಇದೇ 16ರಿಂದ ಕೊರೊನಾ ಸೋಂಕಿನ ವಿರುದ್ಧ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದರೂ ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡುವ ಕಾಯಕದಲ್ಲಿ ದೇಶದಲ್ಲಿ ಕರ್ನಾಟಕವೇ ಮೊದಲ ಸ್ಥಾನಗಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶಾದ್ಯಂತ ಇದುವರೆಗೂ 16 ಲಕ್ಷ ಜನರಿಗೆ ಲಸಿಕೆಗಳನ್ನು ನೀಡಲಾಗಿದೆ. ಜೊತೆಗೆ ಇಡೀ ದೇಶದಲ್ಲಿ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕರ್ನಾಟಕದಲ್ಲಿ ಇದುವರೆಗೂ ಎರಡು ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿಯೇ ಹೆಚ್ಚು ಕೊರೊನಾ ಲಸಿಕೆ ನೀಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂದಿನ ವರೆಗೂ ಒಟ್ಟು 2,06,577 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಮೊದಲ ಹಂತದ ಕೊರೊನಾ ಲಸಿಕಾ ಅಭಿಯಾನದಲ್ಲಿ ರಾಜ್ಯ ಮುನ್ನಡೆಯಲ್ಲಿದೆ.

100%

100%

100%


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp