ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆಂಬ್ಯುಲೆನ್ಸ್ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜಿಲ್ಲೆಯ ಗೋಪಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತಕ್ಕೀಡಾಗಿ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.

Published: 26th January 2021 11:46 AM  |   Last Updated: 26th January 2021 11:52 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ಭಡೋಯ್: ಜಿಲ್ಲೆಯ ಗೋಪಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತಕ್ಕೀಡಾಗಿ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.

ವಾರಾಣಸಿ-ಪ್ರಯಾಗರಾಜ್ ಹೆದ್ದಾರಿಯಲ್ಲಿ ಅಮಾವಾ ಅಂಡರ್‌ಪಾಸ್ ಬಳಿ ನಿಂತಿದ್ದ ಟ್ರಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದಿದೆ. ದಟ್ಟ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಮೃತದೇಹವನ್ನು ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ರಾಜಸ್ಥಾನದ ಚಿತ್ತೋರ್‌ಗಢಕ್ಕೆ ಸಾಗಿಸುತ್ತಿತ್ತು.ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ನಲ್ಲಿ ಕೆಲಸ ಮಾಡುತ್ತಿದ್ದ ವಿಪಿನ್ ಪಾಲ್ ಸಿಂಗ್ (30) ಅವರ ಮೃತದೇಹವನ್ನು ಅವರ ಹಿರಿಯ ಸಹೋದರ ನವನೀತ್ ಸಿಂಗ್ ಮತ್ತು ಅವರ ಸ್ನೇಹಿತ ರಾಜ್‍ವೀರ್ ಮತ್ತು ಇನ್ನಿಬ್ಬರು ಸಾಗಿಸುತ್ತಿದ್ದರು. ಚಾಲಕ ಸೇರಿದಂತೆ ಆಂಬುಲೆನ್ಸ್‌ನಲ್ಲಿದ್ದ ಎಲ್ಲ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp