
ರಾಷ್ಟ್ರಪತಿ ರಾಮನಾಥ್ ಕೋವಿಂದ್
ಬೆಂಗಳೂರು/ಮಡಿಕೇರಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ರಾಷ್ಟ್ರಪತಿಗಳು ಫೆಬ್ರವರಿ 6 ರಂದು ಮಡಿಕೇರಿಯಲ್ಲಿ ನಿಮಾ೯ಣಗೊಂಡಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಕೊಡಗು ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.
ಈ ಸಂಬಂಧ ಇಂದು ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿದ ವಿ ಸೋಮಣ್ಣ ಅವರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಸಿದ್ಧತೆ ಕುರಿತು ಚರ್ಚಿಸಿದರು.
ಫೆಬ್ರವರಿ 5 ರಂದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ 6ನೇ ತಾರೀಖಿನಂದು ಭಾಗಮಂಡಲಕ್ಕೆ ಆಗಮಿಸಲಿದ್ದು, ಅಲ್ಲಿಂದ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಮಡಿಕೇರಿಗೆ ಆಗಮಿಸಲಿದ್ದು ಮಧ್ಯಾಹ್ನದ 3ರ ವೇಳೆಗೆ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಆಗಮಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.