ಹಿಂಸಾಚಾರ ಒಪ್ಪಲ್ಲ: ನಿಜವಾದ ರೈತರು ಕೂಡಲೇ ಹಿಂದಿರುಗಿ - ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇದನ್ನು ಖಂಡಿಸಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಿಜವಾದ ರೈತರು ಕೂಡಲೇ ದೆಹಲಿಯಿಂದ ಹಿಂದಿರುಗಿ ಎಂದು ಹೇಳಿದ್ದಾರೆ.

Published: 26th January 2021 06:20 PM  |   Last Updated: 26th January 2021 06:20 PM   |  A+A-


Amarinder Singh

ಅಮರಿಂದರ್ ಸಿಂಗ್

Posted By : Vishwanath S
Source : The New Indian Express

ಪಂಜಾಬ್: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇದನ್ನು ಖಂಡಿಸಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಿಜವಾದ ರೈತರು ಕೂಡಲೇ ದೆಹಲಿಯಿಂದ ಹಿಂದಿರುಗಿ ಎಂದು ಹೇಳಿದ್ದಾರೆ. 

ದೆಹಲಿಯಲ್ಲಿನ ಹಿಂಸಾಚಾರ ನಿಜಕ್ಕೂ ಆಘಾತ ತಂದಿದೆ. ಕೆಲವು ಅಂಶಗಳ ಹಿಂಸಾಚಾರವು ಸ್ವೀಕಾರಾರ್ಹವಲ್ಲ. ಶಾಂತಿಯುತವಾಗಿ ಪ್ರತಿಭಟಿಸುವ ರೈತರಿಂದ ಉಂಟಾಗುವ ಅಭಿಮಾನವನ್ನು ಅದು ನಿರಾಕರಿಸುತ್ತದೆ. ಕಿಸಾನ್ ನಾಯಕರು ತಮ್ಮನ್ನು ಬೇರ್ಪಡಿಸಿದ್ದಾರೆ ಮತ್ತು #ಟ್ರ್ಯಾಕ್ಟರ್ ರಾಲಿಯನ್ನು ಅಮಾನತುಗೊಳಿಸಿದ್ದಾರೆ. ಎಲ್ಲಾ ನಿಜವಾದ ರೈತರು ದೆಹಲಿಯನ್ನು ಖಾಲಿ ಮಾಡಿ ಗಡಿಗೆ ಮರಳಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರೈತರು - ಪೊಲೀಸರು ನಡುವೆ ಘರ್ಷಣೆ ನಡೆದು ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿಪ್ರಹಾರ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ರೈತ ಮೃತಪಟ್ಟಿದ್ದಾರೆ.

ದೆಹಲಿಯ ಮುಕಾರ್ಬಾ ಚೌಕ್ ನಲ್ಲಿ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ , ಜೊತೆಗೆ ಅಶ್ರುವಾಯು ಪ್ರಯೋಗಿಸಲಾಗಿದೆ. ಆದರೂ ಜಗ್ಗದ ರೈತರು ದೆಹಲಿಯ ಹೃದಯ ಭಾಗ ತಲುಪಿದ್ದು, ಕೆಂಪು ಕೋಟೆಗೆ ನುಗ್ಗಿ ರೈತ ಧ್ವಜ ಹಾರಿಸಿದ್ದರು.

ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಐಟಿಒ ಸೇರಿದಂತೆ ಹಲವು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ದೆಹಲಿಯ ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಯಲ್ಲಿ ಇಂದು ಬೆಳಗ್ಗೆ ಹಿಂಸಾಚಾರ ಭುಗಿಲೆದ್ದಿದ್ದು, ಬ್ಯಾರಿಕೇಡ್ ಗಳನ್ನು ಮುರಿದು ಕಾಶ್ಮೀರಿ ದ್ವಾರವನ್ನು ತಲುಪಿದ ನೂರಾರು ರೈತರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿ ಅಶ್ರುವಾಯು ಪ್ರಯೋಗಿಸಿದ್ದಾರೆ. 

ದೆಹಲಿಯ ಮುಕರ್ಬಾ ಚೌಕ್‌ನಲ್ಲಿ ಘರ್ಷಣೆಗಳು ವರದಿಯಾಗಿದ್ದು, ಅಲ್ಲಿ ರೈತರು ಸಿಮೆಂಟೆಡ್ ಬ್ಯಾರಿಕೇಡ್‌ಗಳನ್ನು ಮುರಿದಿದ್ದಾರೆ. ನಂಗ್ಲಾಯ್‌ನಲ್ಲಿರುವ ಅಡೆತಡೆಗಳನ್ನು ಉಲ್ಲಂಘಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ರೈತರು ತಮ್ಮ ಟ್ರಾಕ್ಟರ್ ರ್ಯಾಲಿಯೊಂದಿಗೆ ನಜಫ್‌ಗಡದ ಕಡೆಗೆ ಮುಂದುವರಿಯಬೇಕಿತ್ತು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp