72ನೇ ಗಣರಾಜ್ಯೋತ್ಸವ ದಿನ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್, ರಾಜಪಥ್‌ನಲ್ಲಿ ಪರೇಡ್‌ ಆರಂಭ

72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. 

Published: 26th January 2021 10:17 AM  |   Last Updated: 26th January 2021 10:33 AM   |  A+A-


The Tricolour unfurled at Rajpath in the presence of President Ram Nath Kovind, Prime Minister Narendra Modi and other dignitaries, on 72nd RepublicDay

ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್

Posted By : Manjula VN
Source : Online Desk

ನವದೆಹಲಿ: 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. 

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ ಸಿಡಿಎಸ್ ರಾವತ್ ಪಾಲ್ಗೊಂಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್​ಪಥ್‌ನಲ್ಲಿ ಪರೇಡ್ ಆರಂಭವಾಗಿದೆ. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯುತ್ತಿದೆ.

ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ಸೇನೆಯು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದೆ.

ದೆಹಲಿಯಲ್ಲಿ ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿದ್ದು, ದಟ್ಟ ಮಂಜು ಕವಿದ ವಾತಾವರಣವಿದ್ದರಿಂದ ದ್ವಜಾರೋಹಣವನ್ನು ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಯಿತು.

ದೆಹಲಿಯ ರಾಜಪಥ್​​ನಲ್ಲಿ ಗಣರಾಜ್ಯೋತ್ಸವ ಪರೇಡ್​ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದೇಶಿ ಅತಿಥಿ ಭಾಗಿಯಾಗ್ತಿಲ್ಲ. ಜೊತೆಗೆ ಬಾಂಗ್ಲಾದೇಶ ವಿಮೋಚನೆಯ 50ನೇ ವರ್ಷದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ನಲ್ಲಿ ಬಾಂಗ್ಲಾದೇಶದ ಸೇನಾ ತುಕಡಿ ಭಾಗಿಯಾಗಲಿದೆ. 

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp