ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

Published: 26th January 2021 07:20 AM  |   Last Updated: 26th January 2021 07:20 AM   |  A+A-


PM modi

ಪ್ರಧಾನಿ ಮೋದಿ

Posted By : Manjula VN
Source : ANI

ನವದೆಹಲಿ: ದೇಶದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಭಾರತದ ಜನತೆಗೆ ಗಣರಾಜ್ಯೋತ್ಸವ ದಿನದ  ಶುಭಾಶಯಗಳು, ಜೈ ಹಿಂದ್ ಎಂದು ಹೇಳಿದ್ದಾರೆ. 

ಕೊರೋನಾ ಮಹಾಮಾರಿ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿದೆ. ಈ ಹೆಮ್ಮಾರಿ ಜನರ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ತಂದಿದೆ. ಇದೇ ರೀತಿ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಯಲ್ಲೂ ಭಾರಿ ಬದಲಾವಣೆಗಳು ಆಗಿವೆ. 

ಹೀಗಾಗಿ ಕಳೆದ ವರ್ಷ ಸ್ವಾಂತತ್ರ್ಯೋತ್ಸವನ್ನ ಸರಳವಾಗಿ ಆಚರಿಸಲಾಗಿತ್ತು. ಇದೇ ರೀತಿ ಈ ಬಾರಿಯ ಗಣರಾಜ್ಯೋತ್ಸವವನ್ನ ಸರಳವಾಗಿ ಆಚರಿಸಲಾಗ್ತಿದೆ. ಇದೇ ರೀತಿ ದೆಹಲಿಯ ರಾಜಪಥ ಮತ್ತು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಗ್ರೌಂಡ್​ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp