ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 12,351.5 ಕೋಟಿ ರೂ. ಅನುದಾನ

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ(ಆರ್‌ಎಲ್‌ಬಿ) ಅನುದಾನ ಒದಗಿಸುವುದಕ್ಕಾಗಿ ಕೇಂದ್ರ ಸರ್ಕಾರ 18 ರಾಜ್ಯಗಳಿಗೆ 12,351.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಮೊತ್ತ 2020-21ರ ಹಣಕಾಸು ವರ್ಷದಲ್ಲಿ ಹಣಕಾಸು...

Published: 27th January 2021 05:12 PM  |   Last Updated: 27th January 2021 06:27 PM   |  A+A-


cash1

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ನವದೆಹಲಿ: ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ(ಆರ್‌ಎಲ್‌ಬಿ) ಅನುದಾನ ಒದಗಿಸುವುದಕ್ಕಾಗಿ ಕೇಂದ್ರ ಸರ್ಕಾರ 18 ರಾಜ್ಯಗಳಿಗೆ 12,351.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಮೊತ್ತ 2020-21ರ ಹಣಕಾಸು ವರ್ಷದಲ್ಲಿ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯಿಂದ ಬಿಡುಗಡೆಯಾದ ಮೂಲ ಅನುದಾನದ ಎರಡನೇ ಕಂತಾಗಿದೆ.

ಮೊದಲ ಕಂತಿಗೆ ಬಳಕೆ ಪ್ರಮಾಣ ಪತ್ರ ನೀಡಿದ 18 ರಾಜ್ಯಗಳಿಗೆ ಮತ್ತು ಪಂಚಾಯತಿ ರಾಜ್ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಮುದಾಯ ಸ್ವತ್ತುಗಳನ್ನು ರಚಿಸಲು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಸುಧಾರಿಸಲು 15ನೇ ಹಣಕಾಸು ಆಯೋಗದ ಶಿಫಾರಸುಗಳಂತೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ.
ಗ್ರಾಮಗಳು, ತಾಲ್ಲೂಕುಗಳು ಮತ್ತು ಜಿಲ್ಲಾ ಮಟ್ಟದ ಮೂರು ಸ್ತರಗಳಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುವು ಮಾಡಿಕೊಡಲು ಈ ಅನುದಾನ ಬಿಡುಗಡೆ ಮಾಡಲಾಗುತ್ತದೆ.

15ನೇ ಹಣಕಾಸು ಆಯೋಗ ಈ ಸಂಸ್ಥೆಗಳಿಗೆ ಎರಡು ರೀತಿಯ ಅನುದಾನ ಶಿಫಾರಸು ಮಾಡಿದೆ. ಈ ಮುನ್ನ, 14 ನೇ ಹಣಕಾಸು ಆಯೋಗ 2020ರ ಜೂನ್‌ನಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಸಂಸ್ಥೆಗಳಿಗೆ 18,199 ಕೋಟಿ ರೂ. ಬಿಡುಗಡೆ ಮಾಡಿತ್ತು. ನಂತರ ಒಂದನೇ ನೇ ಕಂತಿನ ಅನುದಾನವಾದ 15,187.50 ಕೋಟಿ ರೂ. ಹಣವನ್ನು ಸಹ ಎಲ್ಲಾ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp