ರೈತರ ಟ್ರ್ಯಾಕ್ಟರ್ ಪರೇಡ್: ದೆಹಲಿ ಹಿಂಸಾಚಾರ ಬಗ್ಗೆ ಆಯೋಗ ಮಟ್ಟದ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ.

Published: 27th January 2021 02:00 PM  |   Last Updated: 27th January 2021 02:25 PM   |  A+A-


Protesters and police personnel clash at the ramparts of the Red Fort in New Delhi on Tuesday

ನಿನ್ನೆ ದೆಹಲಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಘರ್ಷಣೆ

Posted By : Sumana Upadhyaya
Source : PTI

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ.

ಗಣರಾಜ್ಯೋತ್ಸವ ದಿನ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಹತ್ತಿ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿಸಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದ್ದು ಮತ್ತು ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣಕರ್ತರಾದ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಾನೂನು ಸಾಧ್ಯತೆಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಚಿಸಬೇಕೆಂದು ಸಹ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ಅಡ್ವೊಕೇಟ್ ವಿಶಾಲ್ ತಿವಾರಿ ಎಂಬುವವರು ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಬೇಕು, ಅಲ್ಲದೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಸಾಕ್ಷಿಗಳನ್ನು ಸಂಗ್ರಹಿಸಿ ಕಾಲಮಿತಿಯಲ್ಲಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲು ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದ ಹಿಂಸಾಚಾರದಿಂದ ಸಾರ್ವಜನಿಕ ಆಸ್ತಿಪಾಸ್ತಿಗಳು ನಷ್ಟವಾಗಿದ್ದು, ಜನರ ಸಾಮಾನ್ಯ ಬದುಕಿನ ಮೇಲೆ ಕೂಡ ಸಾಕಷ್ಟು ಪರಿಣಾಮ ಬೀರಿದೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಡ್ವೊಕೇಟ್ ತಿವಾರಿ ಅರ್ಜಿಯಲ್ಲಿ ವಿವರಿಸಿದ್ದಾರೆ. 

ಗಣರಾಜ್ಯೋತ್ಸವ ದಿನ ರೈತರು ಮತ್ತು ಪೊಲೀಸರ ಮಧ್ಯೆ ನಡೆದ ಘರ್ಷಣೆ ಇಡೀ ವಿಶ್ವದ ಗಮನ ಸೆಳೆದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತು ವಿಚಾರಣೆ ನಡೆಸಬೇಕೆಂದು ತಿವಾರಿ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ. 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಲು ತಮ್ಮ ಪ್ರತಿಭಟನೆಯ ವಿಧಾನವನ್ನು ತೀವ್ರಗೊಳಿಸಲು ರೈತರು ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ಅವಧಿಗೆ ಮುನ್ನವೇ ರ್ಯಾಲಿ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ಮುಗಿದು ರಾಜಧಾನಿಯೊಳಗೆ ನುಗ್ಗಿದ್ದರಿಂದ ಪೊಲೀಸರು ಜಲಫಿರಂಗಿ, ಲಾಠಿಚಾರ್ಜ್ ನಡೆಸಿ ರಣರಂಗವಾಗಿ ಮಾರ್ಪಟ್ಟಿತು.ಸಾರ್ವಜನಿಕ ಆಸ್ತಿಪಾಸ್ತಿಗಳು ಕೂಡ ಹಾನಿಯಾಗಿವೆ. 

ದೆಹಲಿ ಪೊಲೀಸರು ಇದುವರೆಗೆ ಘಟನೆಗೆ ಸಂಬಂಧಪಟ್ಟಂತೆ 22 ಎಫ್ಐಆರ್ ಗಳನ್ನು ದಾಖಲಿಸಿದ್ದು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp