ಟ್ರಾಕ್ಟರ್ ರ್ಯಾಲಿ ಹಿಂಸಾಚಾರ: ಕಾನೂನು ಬಾಹಿರವಾಗಿ ನಡೆದುಕೊಂಡಿರುವುದು 'ಅತ್ಯಂತ ದುರದೃಷ್ಟಕರ'- ಶಶಿ ತರೂರ್

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಕೆಂಪುಕೋಟೆ ಪ್ರವೇಶಿಸಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವುದನ್ನು ನಾನು ಖಂಡಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.

Published: 27th January 2021 12:42 AM  |   Last Updated: 27th January 2021 01:13 PM   |  A+A-


shashi Tharoor

ಶಶಿ ತರೂರ್

Posted By : Srinivasamurthy VN
Source : Online Desk

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಕೆಂಪುಕೋಟೆ ಪ್ರವೇಶಿಸಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವುದನ್ನು ನಾನು ಖಂಡಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಕೆಂಪುಕೋಟೆ ಪ್ರವೇಶಿಸಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವುದನ್ನು ನಾನು ಖಂಡಿಸುತ್ತೇನೆ. ಗಣರಾಜ್ಯೋತ್ಸವದಂದು ಪವಿತ್ರ ತಿರಂಗವನ್ನು ಹೊರತು ಪಡಿಸಿ ಯಾವುದೇ ಧ್ವಜ ಕೆಂಪುಕೋಟೆಯ ಮೇಲೆ ಹಾರಬಾರದು. ನಾನು ಮೊದಲಿನಿಂದಲೂ ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೆ. ಆದರೆ, ಇಂದು ಅವರು ಕಾನೂನು ಬಾಹೀರವಾಗಿ  ನಡೆದುಕೊಂಡಿದ್ದನ್ನು ಕ್ಷಮಿಸುವುದಕ್ಕೆ ಸಾದ್ಯವಿಲ್ಲ. ಇದು “ಅತ್ಯಂತ ದುರದೃಷ್ಟಕರ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp