ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಎಐಕೆಎಸ್‌ಸಿಸಿ ಹಿಂದಕ್ಕೆ - ಸರ್ದಾರ್ ವಿಎಂ ಸಿಂಗ್

ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಇದೀಗ ಈ ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ.

Published: 27th January 2021 04:55 PM  |   Last Updated: 27th January 2021 05:51 PM   |  A+A-


VM Singh

ವಿಎಂ ಸಿಂಗ್

Posted By : Vishwanath S
Source : Online Desk

ನವದೆಹಲಿ: ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಇದೀಗ ಈ ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ.

ದೆಹಲಿಯ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಭದ ಮೇಲೆ ಉದ್ರಿಕ್ತ ರೈತರು ಸಿಖ್ ಧ್ವಜವನ್ನು ಹಾರಿಸಿದ್ದರು. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ರೈತರ ಪ್ರತಿಭಟನೆ ವಿರುದ್ಧ ಆಕ್ರೋಶದ ಕೂಗು ಜೋರಾಗುತ್ತಿದ್ದು ಇದೀಗ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆಯಿಂದ ಹೊರಬರುವುದಾಗಿ ಘೋಷಿಸಿದೆ.

ಬೇರೇಯವರ ನಿರ್ದೇಶಕದ ಮೇರೆಗೆ ಪ್ರತಿಭಟನೆ ಮುಂದಕ್ಕೆ ಸಾಗಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ಅವರಿಗೆ ಶುಭ ಹಾರೈಸುತ್ತೇವೆ. ಆದರೆ ಸರ್ದಾರ್ ವಿಎಂ ಸಿಂಗ್ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಘ ಸಮನ್ವಯ ಸಮಿತಿಯು ಈ ಪ್ರತಿಭಟನೆಯಿಂದ ಈಗಿನಿಂದಲೇ ಹಿಂದೆ ಸರಿಯುತ್ತಿದೆ ಎಂದರು.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಲು ತಮ್ಮ ಪ್ರತಿಭಟನೆಯ ವಿಧಾನವನ್ನು ತೀವ್ರಗೊಳಿಸಲು ರೈತರು ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ಅವಧಿಗೆ ಮುನ್ನವೇ ರ್ಯಾಲಿ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ಮುಗಿದು ರಾಜಧಾನಿಯೊಳಗೆ ನುಗ್ಗಿದ್ದರಿಂದ ಪೊಲೀಸರು ಜಲಫಿರಂಗಿ, ಲಾಠಿಚಾರ್ಜ್ ನಡೆಸಿ ರಣರಂಗವಾಗಿ ಮಾರ್ಪಟ್ಟಿತು. ಸಾರ್ವಜನಿಕ ಆಸ್ತಿಪಾಸ್ತಿಗಳು ಕೂಡ ಹಾನಿಯಾಗಿವೆ. 

ದೆಹಲಿ ಪೊಲೀಸರು ಇದುವರೆಗೆ ಘಟನೆಗೆ ಸಂಬಂಧಪಟ್ಟಂತೆ 22 ಎಫ್ಐಆರ್ ಗಳನ್ನು ದಾಖಲಿಸಿದ್ದು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp