'ನೀವು ಮುಖ್ಯಮಂತ್ರಿ, ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ': ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಬಿಎಸ್​ವೈಗೆ 'ಸುಪ್ರೀಂ' ಪ್ರಶ್ನೆ

ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

Published: 27th January 2021 04:41 PM  |   Last Updated: 27th January 2021 04:47 PM   |  A+A-


ಬಿ.ಎಸ್.ಯಡಿಯೂರಪ್ಪ , ಸುಪ್ರೀಂ ಕೋರ್ಟ್

Posted By : Raghavendra Adiga
Source : Online Desk

ನವದೆಹಲಿ: ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದಾಗ್ಯೂ, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು  ನ್ಯಾಯಾಲಯ ನಿರಾಕರಿಸಿತು,

2011 ರಲ್ಲಿ ಖಾಸಗಿ ಹೂಡಿಕೆದಾರರಿಗೆ 26 ಎಕರೆ ಮಂಜೂರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ದೂರನ್ನು ಕುರಿತ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಿರಾಣಿ ಸಲ್ಲಿಸಿದ್ದ ಮನವಿ ಪರಿಶೀಲನೆ ಸುಪ್ರೀಂ ಒಪ್ಪಿಗೆ ನೀಡಿದೆ.

ಯಡಿಯೂರಪ್ಪ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಮುಕುಲ್ ರೋಹಟಗಿ ಹೈಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಂಡರೆ, ಅವರು ಮುಖ್ಯಮಂತ್ರಿ ವಿರುದ್ಧ ವಾರಂಟ್ ಹೊರಡಿಸಬೇಕಾಗುತ್ತದೆ, ಅದಕ್ಕಾಗಿ ಬಂಧನದಿಂದ ರಕ್ಷಣೆ ಕೋರುವುದಾಗಿ ಹೇಳಿದ್ದಾರೆ.

ಈ ವೇಳೆ "ನೀವು ರಾಜ್ಯದ ಮುಖ್ಯಮಂತ್ರಿ ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸಬಹುದು. ಇದಲ್ಲದೆ, ಮುಖ್ಯಮಂತ್ರಿ ವಿರುದ್ಧ ಮನವಿ ಪತ್ರವನ್ನು ನೀಡುತ್ತಾರೆ ಮತ್ತು ವಾರಂಟ್ ಅಲ್ಲ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹೇಳಿದ್ದಾರೆ.

ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಹಿಂದಿನ ದೂರನ್ನು ರದ್ದುಪಡಿಸುವುದು "ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸುವ ಮಾರ್ಗವಾಗಿ ಕಾರ್ಯನಿರ್ವಹಿಸುವುದಿಲ್ಲ" ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಇಂದು ಸಿಎಂ ಹಾಗೂ ನಿರಾಣಿ ಅರ್ಜಿಗಳ ಪರಿಶೀಲನೆಗೆ ಒಪ್ಪಿರುವ ಕೋರ್ಟ್ ಯಾವ ಕಾರಣದಿಂದಲೂ ಆರೋಪಿಗಳನ್ನು ಬಂಧಿಸಬಾರದೆಂದು ತನಿಖಾಧಿಕಾರಿಗಳಿಗೆ ಸೂಚಿಸಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp