ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಖನಬಾಲ್'ನ ಸಂಶೀಪುರದಲ್ಲಿ ಉಗ್ರರು ದಾಳಿ ನಡಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

Published: 28th January 2021 11:08 AM  |   Last Updated: 28th January 2021 11:08 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಖನಬಾಲ್'ನ ಸಂಶೀಪುರದಲ್ಲಿ ಉಗ್ರರು ದಾಳಿ ನಡಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ರಾಷ್ಟ್ರೀಯ ಹೆದ್ದಾಹಿ ಬಳಿ ಸೇನಾಪಡೆಗಳು ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. 

ನಾಲ್ವರು ಯೋಧರ ಪೈಕಿ ಇದೀಗ ಓರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ಸೇನಾಮೂಲಗಳು ಮಾಹಿತಿ ನೀಡಿವೆ. 

ಇನ್ನು ದಾಳಿ ನಡೆಸಿದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಜಂಟಿ ಕಾರ್ಯಾಚರಣೆ ಆರಂಭಗೊಂಡಿದೆ ಎಂದು ವರದಿಗಳು ತಿಳಿಸಿವೆ. 


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp