ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ

ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆತಂದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

Published: 28th January 2021 06:07 PM  |   Last Updated: 28th January 2021 06:07 PM   |  A+A-


mamata1

ಮಮತಾ ಬ್ಯಾನರ್ಜಿ

Posted By : Lingaraj Badiger
Source : PTI

ಕೋಲ್ಕತಾ: ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆತಂದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

ಇಂದು ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ಅಲ್ಲದೆ ಮೂರು ನೂತನ ಕೃಷಿ ಕಾನೂನಗುಳು ರೈತ ವಿರೋಧಿಯಾಗಿದ್ದು ಕಾರ್ಪೋರೇಟ್ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಆರೋಪಿಸಿದರು.

ಇನ್ನು ನಿರ್ಣಯದ ಕುರಿತು ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರ್ಕಾರ ಕೂಡಲೇ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಳಿಬೇಕು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ಮತ್ತು ಕಾಂಗ್ರೆಸ್ ಈ ನಿರ್ಣಯವನ್ನು ಬೆಂಬಲಿಸಿದವು. ಆದರೆ ಕೆಲವು ವರ್ಷಗಳ ಹಿಂದೆ ಅಂಗೀಕರಿಸಿದ ಇದೇ ರೀತಿಯ ಕಾನೂನುಗಳನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಕೂಡಲೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಬಳಿಕ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಸದನವನ್ನು ತ್ಯಜಿಸಿದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp