ಒಸ್ಮಾನಿಯಾ ವಿವಿಯಲ್ಲಿ 'ಬೀಫ್ ಫೆಸ್ಟಿವಲ್': ಬಿಜೆಪಿ ಶಾಸಕನಿಗೆ ಒಂದು ವರ್ಷ ಜೈಲು ಶಿಕ್ಷೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಗೋ ಮಾಂಸ ಉತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರಿಗೆ ನಾಂಪಲ್ಲಿ ವಿಶೇಷ ನ್ಯಾಯಾಲಯ ಒಂದೂ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

Published: 29th January 2021 08:18 PM  |   Last Updated: 29th January 2021 08:18 PM   |  A+A-


Telangana_BJP_MLA_Raja_Singh1

ಬಿಜೆಪಿ ಶಾಸಕ ರಾಜಾಸಿಂಗ್

Posted By : Nagaraja AB
Source : The New Indian Express

ಹೈದರಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಗೋ ಮಾಂಸ ಉತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರಿಗೆ ನಾಂಪಲ್ಲಿ ವಿಶೇಷ ನ್ಯಾಯಾಲಯ ಒಂದೂ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ಈ ಪ್ರಕರಣದಲ್ಲಿ ದೂಷಿ ಎಂದು ಸಾಬೀತಾಗಿ ಜೈಲು ಶಿಕ್ಷೆ ತೀರ್ಪು ಹೊರಬಂದ ಕೂಡಲೇ ಶಾಸಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ನೀಡಿರುವ ನ್ಯಾಯಾಲಯ, ಹೈಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ.

2015ರಲ್ಲಿ ಒಸ್ಮಾನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಗೋ ಮಾಂಸ ಉತ್ಸವಕ್ಕೆ ಅಡ್ಡಿಪಡಿಸುವ ಪ್ರಯತ್ನ , ಪೊಲೀಸರ ಮೇಲೆ ಹಲ್ಲೆ, ಬೆದರಿಕೆಗಾಗಿ ಶಾಸಕ ರಾಜಾಸಿಂಗ್ ವಿರುದ್ಧ ಬೊಲ್ಲಾರಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ಆಯೋಜಿಸಿದ್ದ ಬೀಫ್ ಫೆಸ್ಟಿವಲ್ ವಿರುದ್ಧ ಪಕ್ಷದ ಕೆಲ ಕಾರ್ಯಕರ್ತರೊಂದಿಗೆ ಬಿಜೆಪಿ ಶಾಸಕ ಪ್ರತಿಭಟನೆ ನಡೆಸಿದ್ದರು.

ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗಾಗಿ ಪೊಲೀಸರು ವಿಶೇಷ ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದ್ದು, ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp