ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತನ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಶಶಿ ತರೂರ್, ರಾಜ್ದೀಪ್ ಸರ್ದೇಸಾಯಿ ಇತರರ ವಿರುದ್ಧ ಎಫ್ಐಆರ್!
ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ವೇಳೆ ರೈತನೋರ್ವನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರು, ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಹಲವರ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
Published: 29th January 2021 01:34 AM | Last Updated: 29th January 2021 01:51 AM | A+A A-

ಸಂಗ್ರಹ ಚಿತ್ರ
ನವದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ವೇಳೆ ರೈತನೋರ್ವನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರು, ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಹಲವರ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಆರು ಪತ್ರಕರ್ತರ ವಿರುದ್ಧ ನೊಯ್ಡಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೂಲಗಳ ಪ್ರಕಾರ ಪತ್ರಕರ್ತರಾದ ರಾಜ್ದೀಪ್ ಸರ್ದೇಸಾಯಿ, ಶ್ರೀನಾಲ್ ಪಾಂಡೆ, ನ್ಯಾಷನಲ್ ಹೆರಾಲ್ಡ್ ನ ಜಾಫರ್ ಆಘಾ, ದಿ ಕ್ಯಾರವಾನ್ ನ ಸಮೂಹ ಸಂಪಾದಕರಾದ ಪರೇಶ್ ನಾಥ್, ಅನಂತ್ ನಾಥ್, ವಿನೋದ್ ಕೆ ಜೋಸ್ ಅವರ ವಿರುದ್ಧ ಕೋಮು ಪ್ರಚೋದನೆ ಮತ್ತು ಗಲಭೆಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ಎಫ್ ಐ ಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ವಿವಿಧ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೇಶದ್ರೋಹ, ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವುದು, ಶಾಂತಿ ಕದಡುವ ಉದ್ದೇಶದಿಂದ ಅಪಮಾನ ಮಾಡುವುದು, ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಕ್ರಿಮಿನಲ್ ಪಿತೂರಿ ನಡೆಸಿದ ಪ್ರಕರಣಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
We have registered FIR against #rajdeepsardesai, Tharoor & 6 six others u/s 152A, 153B, 295A, 298, 504, 506, 505(2),124A,34,120B IPC & u/s 66 of IT Act at Sector-20 Police Station Noida, for instigating violence through their SM Posts.
— Prashant Patel Umrao (@ippatel) January 28, 2021
UP police is ready for action against them. pic.twitter.com/cCyiqW92GT
ಟ್ರಾಕ್ಟರ್ ರ್ಯಾಲಿ ವೇಳೆ ಟ್ರಾಕ್ಟರ್ ಮಗುಚಿ ರೈತ ಸಾವನ್ನಪ್ಪಿದ್ದ. ಆದರೆ ಈ ವಿಚಾರವನ್ನು ಪೂರ್ತಿಯಾಗಿ ತಿಳಿಯದೇ ಕೆಲ ಮಾಧ್ಯಮಗಳು ರೈತರ ಗೋಲಿಬಾರ್ ನಲ್ಲಿ ರೈತ ಸಾವನ್ನಪ್ಪಿದ್ದಾನೆ ಎಂದು ವರದಿ ಮಾಡಿದ್ದವು, ಇದೇ ವಿಚಾರವಾಗಿ ಕೆಲ ಪತ್ರಕರ್ತರೂ ಟ್ವೀಟ್ ಮಾಡಿದ್ದರು. ಇದನ್ನು ಪ್ರಶ್ನಿಸಿ 35 ವರ್ಷದ ನೋಯ್ಡಾ ನಿವಾಸಿ ಅರ್ಪಿತ್ ಮಿಶ್ರಾ, ಮಾಧ್ಯಮಗಳು ಹಾಗೂ ಪತ್ರಕರ್ತರ ವಿರುದ್ಧ ಆಕ್ರಮಣಕಾರಿ, ದಾರಿತಪ್ಪಿಸುವ ಮತ್ತು ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಕೆ ಮಾಡಿದ್ದರು, ಆರೋಪಿಗಳು ತಮ್ಮ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮೂಲಕ ಪ್ರಶ್ನಾರ್ಹ ಸುದ್ದಿಗಳನ್ನು ರಿಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ನೊಯ್ಡಾ ಪೊಲೀಸರು, ದೂರನ್ನು ಪರಿಶೀಲಿಸಲಾಗುತ್ತಿದ್ದು, ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದರು, ಅಂತೆಯೇ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುವಂತಹ ಪೂರ್ವಾಗ್ರಹ ಪೀಡಿತ ರೀತಿಯಲ್ಲಿ ವರ್ತಿಸಲಾಗಿದೆ ಎಂದು ಎಫ್ಐಆರ್ ನಲ್ಲಿ ಅಭಿಪ್ರಾಯಪಡಲಾಗಿದೆ.
ಇನ್ನು ಟ್ರಾಕ್ಟರ್ ರ್ಯಾಲಿಯಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ರೈತ ನವನೀತ್ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಇಂಡಿಯಾ ಟುಡೆ ಮುಖ್ಯಸ್ಥ ರಾಜದೀಪ್ ಸರ್ದೇಸಾಯಿ ಜನವರಿ 26 ರಂದು ಟ್ವೀಟ್ ಮಾಡಿದ್ದರು. ಆದರೆ, ಅಂದು ಮೃತ ರೈತ ನವನೀತ್ ಸಿಂಗ್ ಟ್ರಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.