ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಇತರ ಟಿಎಂಸಿ ನಾಯಕರು

ಇತ್ತೀಚಿಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಹಾಗೂ ಇತರ ಟಿಎಂಸಿ ಮುಖಂಡರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು.

Published: 30th January 2021 11:34 PM  |   Last Updated: 30th January 2021 11:34 PM   |  A+A-


amith-bjp1

ಅಮಿತ್ ಶಾ ಜತೆ ಟಿಎಂಸಿ ಬಂಡಾಯ ಮುಖಂಡರು

Posted By : Lingaraj Badiger
Source : PTI

ನವದೆಹಲಿ: ಇತ್ತೀಚಿಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಹಾಗೂ ಇತರ ಟಿಎಂಸಿ ಮುಖಂಡರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು.

ರಾಜೀವ್ ಬ್ಯಾನರ್ಜಿ, ಟಿಎಂಸಿಯಿಂದ ಉಚ್ಫಾಟನೆಯಾಗಿದ್ದ ಶಾಸಕಿ ವೈಶಾಲಿ ದಾಲ್ಮಿಯಾ, ಹೂಗ್ಲಿ ಜಿಲ್ಲೆಯ ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ಮಾಜಿ ಶಾಸಕ ಪಾರ್ಥ ಸಾರಥಿ ಚಟರ್ಜಿ ಹಾಗೂ ನಟ ರುದ್ರಾನಿಲ್ ಘೋಷ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ಶುಕ್ರವಾರ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳದ ಪ್ರವಾಸವನ್ನು ರದ್ದುಗೊಳಿಸಿದ್ದರು. ಹೀಗಾಗಿ ಪಕ್ಷ ಸೇರಬೇಕಿದ್ದ ತೃಣಮೂಲ ಕಾಂಗ್ರೆಸ್‌ ಬಂಡಾಯ ನಾಯಕರನ್ನು ಇಂದೇ ವಿಶೇಷ ವಿಮಾನದ ಮೂಲಕ ದೆಹಲಿಗೆ ಬರಮಾಡಿಕೊಂಡಿದ್ದರು.

ಟಿಎಂಸಿ ಬಂಡಾಯ ನಾಯಕರು ಪಕ್ಷ ಸೇರಿದ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು, ಅವರೆಲ್ಲರೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp