ನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ

ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ

ನವದೆಹಲಿ: ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ. ಅದರ ಜೊತೆಗೆ ನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜನರು ಸಾಮಾಜಿಕ ಮಾಧ್ಯಮಗಳ ಬೆಳವಣಿಗೆ, ಪ್ರಭಾವದ ಮಧ್ಯೆ ಸರಿ-ತಪ್ಪು, ಒಳ್ಳೆಯದು-ಕೆಟ್ಟದು ಮತ್ತು ನೈಜ ಹಾಗೂ ನಕಲಿಗಳ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯಲು ಅಸಮರ್ಥರಾಗಿ ಹೋಗುತ್ತಿದ್ದಾರೆ ಎಂದು ಸಹ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾಧ್ಯಮ ಪ್ರಯೋಗಗಳು ಮಾರ್ಗದರ್ಶಕ ಅಂಶವಾಗಿರಲು ಸಾಧ್ಯವಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿಗಳು, ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ಸಂಸ್ಥೆಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬ ಬಗ್ಗೆ ಹೇಳಿಕೊಡುವುದು, ಜಾಗೃತಿ ಮೂಡಿಸುವುದು ಸಹ ಕಡ್ಡಾಯವಾಗಿದೆ ಎಂದಿದ್ದಾರೆ.

ನಿನ್ನೆ ದೆಹಲಿಯಲ್ಲಿ ಅವರು 15ನೇ ನ್ಯಾಯಮೂರ್ತಿ ಪಿ ಡಿ ದೇಸಾಯಿ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುವ ವೇಳೆ, ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಾಂಗವು ಸರ್ಕಾರಿ ಅಧಿಕಾರ ಮತ್ತು ಕ್ರಿಯೆಯ ಬಗ್ಗೆ ಪರೀಕ್ಷಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ. ಹಾಗೆಂದು ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗ ನಿಯಂತ್ರಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com