ಕೋವಿಡ್ ಲಸಿಕೆ: 34 ಕೋಟಿ ಡೋಸ್ ವಿತರಣೆ, ಭಾರತದ ಮಹತ್ವದ ಮೈಲಿಗಲ್ಲು

ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 34 ಡೋಸ್ ಲಸಿಕೆ ವಿತರಣೆ ಮಾಡಿದೆ.
ಲಸಿಕೆ ಪಡೆಯಲು ಸರತಿ ಸಾಲಿನಲ್ಲಿ ನಿಂತಿರುವ ಜನ
ಲಸಿಕೆ ಪಡೆಯಲು ಸರತಿ ಸಾಲಿನಲ್ಲಿ ನಿಂತಿರುವ ಜನ

ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 34 ಡೋಸ್ ಲಸಿಕೆ ವಿತರಣೆ ಮಾಡಿದೆ.

ಹೌದು.. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ದೇಶಾದ್ಯಂತ ಒಟ್ಟು 34,00,76,232 ಡೋಸ್ ಲಸಿಕೆ ನೀಡಲಾಗಿದೆ. 

ಕಳೆದ 24 ಗಂಟೆಗಳಲ್ಲಿ 42 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದ್ದು, ಇದರಲ್ಲಿ 32,80,998 ಫಲಾನುಭವಿಗಳಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದ್ದು, 9,83,125 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ.

ಗುರುವಾರ 18-44 ವರ್ಷ ವಯಸ್ಸಿನ 24,51,539 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 89,027 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ, ಮತ್ತು ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳು 18-44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಕೋವಿಡ್-19 ಲಸಿಕೆಯನ್ನು ನೀಡಿವೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com