ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆ: ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಐಎಎಫ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ದಾಳಿ ಬೆನ್ನಲ್ಲೇ ಜಮ್ಮುವಿನಲ್ಲಿ ಪದೇ ಪದೇ ಡ್ರೋಣ್ ಹಾರಾಟಗಳು ಪತ್ತೆಯಾಗುತ್ತಲೇ ಇವೆ. ಶುಕ್ರವಾರ ಕೂಡ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಐಎಎಫ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ದಾಳಿ ಬೆನ್ನಲ್ಲೇ ಜಮ್ಮುವಿನಲ್ಲಿ ಪದೇ ಪದೇ ಡ್ರೋಣ್ ಹಾರಾಟಗಳು ಪತ್ತೆಯಾಗುತ್ತಲೇ ಇವೆ. ಶುಕ್ರವಾರ ಕೂಡ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. 

ಜಮ್ಮುವಿನ ಅರ್ನಿಯಾ ಸೆಕ್ಟರ್ ಹೊರವಲಯದಲ್ಲಿ ಇಂದು ಬೆಳಗಿನ ಜಾವ 4.25ರ ಸುಮಾರಿಗೆ ಡ್ರೋಣ್ ಹಾರಾಡಿರುವುದು ಪತ್ತೆಯಾಗಿದ್ದು, ಕೂಡಲೇ ಎಚ್ಚೆತ್ತ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆಂದು ಜಮ್ಮುವಿನ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿರುವ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

6ಕ್ಕೂ ಹೆಚ್ಚು ಸುತ್ತಿನಲ್ಲಿ ಭದ್ರತಾ ಪಡೆಗಳು ಡ್ರೋಣ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಗಸದಲ್ಲಿ ಹಾರಾಡುತ್ತಿದ್ದ ಡ್ರೋಣ್ ಪಾಕಿಸ್ತಾನದ ಕಡೆಗೆ ಹಿಂತಿರುಗಿತ್ತು ಎಂದು ಹೇಳಿದ್ದಾರೆ. 

ಅರ್ನಿಯಾ ಸೆಕ್ಟರ್ ನ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡ್ರೋಣ್ ಹಾರಾಡ ಪತ್ತೆಯಾಗುತ್ತಿದ್ದಂತೆಯೇ ಭದ್ರತಾ ಪಡೆಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಗುಂಡಿನ ದಾಳಿ ನಡೆಸಿದ್ದಾರೆಂದು ಗಡಿ ಭದ್ರತಾ ಪಡೆಯ ವಕ್ತಾರರು ಮಾಹಿತಿ ನೀಡಿದ್ದಾರೆ. 

ಡ್ರೋನ್ ದಾಳಿಯ ಆತಂಕದ ಹಿನ್ನೆಲೆಯಲ್ಲಿ ಮಿಲಿಟರಿ ನೆಲೆಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಜಮ್ಮು ಹೊರತುಪಡಿಸಿ, ಪಠಾಣ್‌ಕೋಟ್‌ನ ಪ್ರಮುಖ ಮಿಲಿಟರಿ ನೆಲೆಗಳ ಸುತ್ತ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ. ಐದು ವರ್ಷಗಳ ಹಿಂದೆ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com