ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆ: ಅಖಿಲೇಶ್'ಗೆ ಮುಖಭಂಗ, 75 ಸ್ಥಾನಗಳ ಪೈಕಿ 67ರಲ್ಲಿ ಬಿಜೆಪಿಗೆ ಭರ್ಜರಿ ಜಯ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಯಾಣ ಯೋಜನೆಗಳು ಕಾರಣ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಯಾಣ ಯೋಜನೆಗಳು ಕಾರಣ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಗೆ ಮುಖಭಂಗವಾಗಿದ್ದು ಬಿಜೆಪಿ 75 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

22 ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅವಿರೋಧ ಆಯ್ಕೆ ಪೈಕಿ ಬಿಜೆಪಿಯ 21 ಅಭ್ಯರ್ಥಿಗಳು ಆಯ್ಕೆಯಾಗಿದ್ದು ಸಮಾಜವಾದಿ ಪಕ್ಷದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. 

ಬಿಜೆಪಿಯ ಐತಿಹಾಸಿಕ ಗೆಲುವಿನ ಬಗ್ಗೆ ಯೋಗಿ ಆದಿತ್ಯನಾಥ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಉತ್ತಮ ಆಡಳಿತ, ಪ್ರಧಾನಿ ಮೋದಿ ಅವರ ಕಲ್ಯಾಣ ಯೋಜನೆಗಳು ಹಾಗೂ ಜನರು ಬಿಜೆಪಿಯ ಮೇಲಿಟ್ಟಿರುವ ನಂಬಿಕೆ ಗೆಲುವಿಗೆ ಕಾರಣ ಎಂದು ಟ್ವೀಟಿಸಿದ್ದಾರೆ. 

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಹ ಟ್ವೀಟ್ ಮಾಡಿ ಬಿಜೆಪಿಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com