ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್!

ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ  11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ.
ತಿರಥ್ ಸಿಂಗ್ ರಾವತ್
ತಿರಥ್ ಸಿಂಗ್ ರಾವತ್

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ  11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ. ರಾವತ್ ಮುಖ್ಯಮಂತ್ರಿಯಾಗಿ ಇನ್ನೂ ನಾಲ್ಕು ತಿಂಗಳು ಕಳೆದೆ ಇರಲಿಲ್ಲ, ಆಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ನೂತನ ನಾಯಕನ ಆಯ್ಕೆಗಾಗಿ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆಯ್ಕೆಯಾಗುವವರು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಶಾಸಕರಾದ ಸತ್ಪಲ್ ಮಹಾರಾಜ್ ಮತ್ತು ದಾನ್ ಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಈ ಇಬ್ಬರು ನಾಯಕರನ್ನು ಬಿಜೆಪಿ ಕೇಂದ್ರಿಯ ವರಿಷ್ಠರು ಶುಕ್ರವಾರ ದೆಹಲಿಗೆ ಕರೆದಿದ್ದರು. ಡೆಹ್ರಾಡೂನ್ ನಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಯಲ್ಲಿ ವೀಕ್ಷಕರಾಗಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಭಾಗವಹಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ರಾವತ್ ಇದೇ ವರ್ಷದ ಮಾರ್ಚ್ 10 ರಂದು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ, ಪಕ್ಷದೊಳಗೆ ತುಂಬಾ ಸಮಸ್ಯೆ ಎದುರಿಸುತ್ತಿದ್ದರು ಎಂಬ ಸ್ವಪಕ್ಷೀಯರೇ ಆರೋಪಿಸಿದ್ದಾರೆ.

ಸಂಸತ್ ಸದಸ್ಯರಾಗಿರುವ ರಾವತ್, ಸಂವಿಧಾನದ ಪ್ರಕಾರ, ಮುಖ್ಯಮಂತ್ರಿಯಾಗಿ ಮುಂದುವರೆಯಲು ಆರು ತಿಂಗಳೊಳಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಬೇಕಾಗಿದೆ. ಆದರೆ, ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಗೆಲ್ಲುವ ವಿಶ್ವಾಸದಲ್ಲಿ ಪಕ್ಷ ಇಲ್ಲ. ಕಾನೂನು ಸಂಕೀರ್ಣತೆ ಕೂಡಾ ಇದೆ. ಸಿಎಂ ಆದ ನಂತರ ಸಾಕಷ್ಟು ವಿವಾದಗಳಿಗೆ ಕಾರಣರಾಗಿದ್ದ ರಾವತ್ ಅವರ ಬಗ್ಗೆ ಹಿರಿಯ ನಾಯಕರಿಗೂ ಒಳ್ಳೆಯ ಅಭಿಪ್ರಾಯವಿರಲಿಲ್ಲ ಎಂದು ಪಕ್ಷದೊಳಗಿನವರೇ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com