ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನ

ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ  ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.
ಸ್ಟ್ಯಾನ್‌ ಸ್ವಾಮಿ
ಸ್ಟ್ಯಾನ್‌ ಸ್ವಾಮಿ

ಮುಂಬೈ: ಕಳೆದ ವರ್ಷ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಲ್ಪಟ್ಟಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ  ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ ಅವರಿಗೆ ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ಅಳವಡಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ. ಮೇ 28 ರಂದು ನ್ಯಾಯಾಲಯದ ಆದೇಶದ  ಹಿನ್ನೆಲೆಯಲ್ಲಿ ಸ್ಟಾನ್ ಸ್ವಾಮಿ ಅವರು ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ವಾರ, ಸ್ಟಾನ್ ಸ್ವಾಮಿ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ಒಂದು ಸೆಕ್ಷನ್ ಅನ್ನು ಪ್ರಶ್ನಿಸಿದ್ದರು. ಎಲ್ಗಾರ್ ಪ್ರಕರಣದಲ್ಲಿ ಸ್ಟಾನ್ ಸ್ವಾಮಿ ಹಾಗೂ  ಸಹ-ಆರೋಪಿಗಳನ್ನು ನವೀ ಮುಂಬಯಿಯ ತಲೋಜ  ಜೈಲಿನಲ್ಲಿಇರಿಸಲಾಗಿತ್ತು. ಜೈಲಿನಲ್ಲಿ  ಅಸಮರ್ಪಕ ಆರೋಗ್ಯ ಸೌಲಭ್ಯಗಳ ಬಗ್ಗೆ ಸ್ವಾಮಿ ಪದೇ ಪದೇ ದೂರು ನೀಡಿದ್ದರು.

ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟೀಸ್
ಈ ಹಿಂದೆ ಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಅವರ ಆರೋಗ್ಯ ಸ್ಥಿತಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟೀಸ್ ನೀಡಿತ್ತು. ಮಹಾರಾಷ್ಟ್ರದ ತಲೋಜಾ ಕೇಂದ್ರ  ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ಟಾನ್ ಸ್ವಾಮಿ ಅವರನ್ನ ಕೆಲ ವಾರಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಇನ್ನಷ್ಟು ವ್ಯತ್ಯಯವಾಗಿ ನಿನ್ನೆ ಭಾನುವಾರ ಸ್ವಾಮಿ ಅವರಿಗೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ.

ಆದರೆ, ನ್ಯಾಯಾಂಗ ಬಂಧನಕ್ಕೂ  ಮುನ್ನ ಆರೋಗ್ಯವಾಗಿದ್ದ ಸ್ಟ್ಯಾನ್ ಸ್ವಾಮಿ ಅವರ ಸ್ಥಿತಿ ಈ ಮಟ್ಟಕ್ಕೆ ತಲುಪಿರುವ ವಿಚಾರವನ್ನು ಕೆಲ ಸಂಘಟನೆಗಳು ಬಾಂಬೆ ಹೈಕೋರ್ಟ್ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಗಮನಕ್ಕೆ ತಂದಿವೆ. ಮಾನವ ಹಕ್ಕು ಆಯೋಗ ಈ ಸಂಬಂಧ ನಿನ್ನೆ ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು,  ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com