ನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್
ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೇ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
Published: 05th July 2021 01:56 PM | Last Updated: 05th July 2021 02:14 PM | A+A A-

ದಿಗ್ವಿಜಯ್ ಸಿಂಗ್
ನವದೆಹಲಿ: ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೇ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಎಲ್ಲಾ ಭಾರತೀಯರ ಡಿಎನ್ ಎ ಒಂದೇ ಎಂಬ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಹೇಳಿದ ಮಾತಿನ ಹಾಗೆಯೇ ಭಾಗವತ್ ಬದ್ದರಾಗಿರಬೇಕು, ಅಮಾಯಕ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಬೇಕು ಎಂದು ಸವಾಲು ಹಾಕಿದ್ದಾರೆ.
ಆದರೆ ಹಾಗಾಗಲು ಸಾಧ್ಯವಿಲ್ಲ, ಅವರು ಆಡುವ ಮಾತೇ ಬೇರೆ, ನಡೆದು ಕೊಳ್ಳುವ ರೀತಿಯೇ ಬೇರೆ ಎಂದು ಆರೋಪಿಸಿದ್ದಾರೆ. ಭಾನುವಾರ ನಡೆದ ಆರ್ ಎಸ್ ಎಸ್ ಮಂಚ್ ನಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಗೋವು ಪವಿತ್ರವಾದ ಪ್ರಾಣಿ. ಆದರೆ ಬೇರೆಯವರನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿರುವವರು ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಅಂತಹವರ ವಿರುದ್ಧ ಪಕ್ಷಪಾತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದರು.
ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಖೆಡ್ಡಕ್ಕೆ ಯಾರೂ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯ ಹೆಸರಲ್ಲಿ ಮೊದಲು ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಆಗಿದ್ದರು ಎಂಬ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು. ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್‌ಎಗಳು ಒಂದೇ. ಆಚರಣೆಯ ಆಧಾರದಲ್ಲಿ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಭಾಗವತ್ ಪ್ರತಿಪಾಧಿಸಿದ್ದರು.