ಕಳೆದ 111 ದಿನಗಳಲ್ಲಿ ದೇಶದಲ್ಲಿ ಇಂದು ಅತಿ ಕಡಿಮೆ ಕೊರೋನಾ ಸೋಂಕು: 34,703 ಹೊಸ ಕೇಸು, 553 ಸಾವು

ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ. 
ಕೋವಿಡ್ ಲಸಿಕೆ ನೀಡುತ್ತಿರುವುದು
ಕೋವಿಡ್ ಲಸಿಕೆ ನೀಡುತ್ತಿರುವುದು

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ. ಕಳೆದ 111 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಸೋಂಕಿನ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 553 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 4 ಲಕ್ಷದ 03 ಸಾವಿರದ 281ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4 ಲಕ್ಷದ 64 ಸಾವಿರದ 357 ಇದೆ. 
ಈ ನಡುವೆ ಕಳೆದ 24 ಗಂಟೆಗಳಲ್ಲಿ 51 ಸಾವಿರದ 864 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2 ಕೋಟಿಯ 97 ಲಕ್ಷದ 52 ಸಾವಿರದ 294ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16 ಲಕ್ಷದ 47 ಸಾವಿರದ 424 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 42 ಕೋಟಿಯ 14 ಲಕ್ಷದ 24 ಸಾವಿರದ 881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಇದುವರೆಗೆ 37 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲಿ 23 ಲಕ್ಷದ 80 ಸಾವಿರಕ್ಕೂ ಅಧಿಕ ಡೋಸ್ ಲಸಿಕೆಯನ್ನು ಒದಗಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ ಜೂನ್ 21ರಿಂದ ಆರಂಭವಾದ ಕೋವಿಡ್ ಲಸಿಕೆ ಸಾರ್ವತ್ರಿಕ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಒದಗಿಸುತ್ತಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com