ಎಲ್ಲವೂ ಕಾನೂನಿನ ಪ್ರಕಾರವೇ ನಡೆದಿದೆ: ಫಾದರ್ ಸ್ಟಾನ್ ಸ್ವಾಮಿ ಸಾವಿನ ಕುರಿತಾದ ಟೀಕೆಗಳನ್ನು ತಿರಸ್ಕರಿಸಿದ ಮೋದಿ ಸರ್ಕಾರ

ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಟೀಕೆಗಳನ್ನು ಭಾರತ ತಿರಸ್ಕರಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ
ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ

ನವದೆಹಲಿ: ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಟೀಕೆಗಳನ್ನು ಭಾರತ ತಿರಸ್ಕರಿಸಿದೆ.

ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ. ಅಧಿಕಾರಿಗಳು ಕಾನೂನು ಉಲ್ಲಂಘನೆಗಳ ವಿರುದ್ಧ ಕಾರ್ಯನಿರ್ವಹಿಸುತ್ತಾರೆ. ಅಲ್ಲದೆ ಹಕ್ಕುಗಳ ಕಾನೂನುಬದ್ಧ ವ್ಯಾಯಾಮವನ್ನು ತಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಭಾರತ ತನ್ನ ಎಲ್ಲ ನಾಗರಿಕರ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ವಿದೇಶಾಂಗ ಸಚಿವಾಲಯ, ದೇಶದ ಪ್ರಜಾಪ್ರಭುತ್ವ ರಾಜಕೀಯವು ಸ್ವತಂತ್ರ ನ್ಯಾಯಾಂಗ. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಮಾನವ ಹಕ್ಕುಗಳ ಆಯೋಗಗಳಿಂದ ಪೂರಕವಾಗಿದೆ ಎಂದು ಹೇಳಿದೆ.

ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಕಾನೂನುಬಾಹಿರ ಚಟುವಟಿಕೆ(ತಡೆಗಟ್ಟುವಿಕೆ) ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ 84 ವರ್ಷದ ಸ್ಟಾನ್ ಸ್ವಾಮಿ ಸೋಮವಾರ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. 

ಜೆಸ್ಯೂಟ್ ಫಾದರ್ ಮತ್ತು ಹಕ್ಕುಗಳ ಕಾರ್ಯಕರ್ತರ ಸಾವಿನ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್, ಅಮೆರಿಕಾ ಮತ್ತು ಯುರೋಪಿಯನ್ ಯೂನಿಯನ್(ಇಯು)ನ ಮಾನವ ಹಕ್ಕುಗಳ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದರಿಂದ ಭಾರತದ ಪ್ರತಿಪಾದನೆ ಹೊರಬಿದ್ದಿದೆ.

ಫಾದರ್ ಸ್ಟಾನ್ ಸ್ವಾಮಿಯನ್ನು ಕಾನೂನಿನಡಿಯಲ್ಲಿ ಸರಿಯಾದ ಪ್ರಕ್ರಿಯೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿ ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧದ ಆರೋಪಗಳ ನಿರ್ದಿಷ್ಟ ಸ್ವರೂಪದಿಂದಾಗಿ, ಅವರ ಜಾಮೀನು ಅರ್ಜಿಗಳನ್ನು ನ್ಯಾಯಾಲಯಗಳು ತಿರಸ್ಕರಿಸಿವೆ.

ಭಾರತದಲ್ಲಿ ಅಧಿಕಾರಿಗಳು ಕಾನೂನು ಉಲ್ಲಂಘನೆಗಳ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಾರೆ ಹೊರತು ಕಾನೂನುಬದ್ಧ ಹಕ್ಕುಗಳ ವಿರುದ್ಧವಾಗಲ್ಲ. ಅಂತಹ ಎಲ್ಲಾ ಕ್ರಮಗಳು ಕಟ್ಟುನಿಟ್ಟಾಗಿ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com