ಪ್ರಜ್ಞಾ ಸಿಂಗ್ ಡ್ಯಾನ್ಸ್
ಪ್ರಜ್ಞಾ ಸಿಂಗ್ ಡ್ಯಾನ್ಸ್

ಬ್ಯಾಸ್ಕೆಟ್ ಬಾಲ್ ನಂತರ ಪ್ರಗ್ಯಾ ಸಿಂಗ್‌ ಠಾಕೂರ್ ಡ್ಯಾನ್ಸ್‌ ವಿಡಿಯೋ ವೈರಲ್

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್ ಭೋಪಾಲ್‌ನಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಇತ್ತೀಚೆಗೆ ವೈರಲ್‌ ಆಗಿತ್ತು. ಈಗ ವಿವಾಹವೊಂದರಲ್ಲಿ ಪ್ರಗ್ಯಾ ಸಿಂಗ್‌ ಠಾಕೂರ್ ಡ್ಯಾನ್ಸ್‌ ಮಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ. 

ಭೋಪಾಲ್: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್ ಭೋಪಾಲ್‌ನಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಇತ್ತೀಚೆಗೆ ವೈರಲ್‌ ಆಗಿತ್ತು. ಈಗ ವಿವಾಹವೊಂದರಲ್ಲಿ ಪ್ರಗ್ಯಾ ಸಿಂಗ್‌ ಠಾಕೂರ್ ಡ್ಯಾನ್ಸ್‌ ಮಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ. 

ಈ ವಿಡಿಯೋ ವಿಚಾರದಲ್ಲಿ ಪ್ರಗ್ಯಾಗೆ ಕಾಂಗ್ರೆಸ್‌ ಟಾಂಗ್‌ ನೀಡಿದೆ. ಬಿಜೆಪಿ ಸಂಸದೆ ತಾನು ಆಯೋಜಿಸಲು ಸಹಾಯ ಮಾಡಿದ ವಿವಾಹ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಿದ್ದು ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾಂಗ್ರೆಸ್‌ನ ಕೆಂಗಣ್ಣಿಗೆ ಗುರಿಯಾಗಿದೆ.

ಸದಾ ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಅನಾರೋಗ್ಯದ ಕಾರಣವನ್ನು ಉಲ್ಲೇಖಿಸಿ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದಿರುವ ಪ್ರಗ್ಯಾರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ. ಇದನ್ನು ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಹಂಚಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ

Related Stories

No stories found.

Advertisement

X
Kannada Prabha
www.kannadaprabha.com