ಜುಲೈ 17ರಂದು ಈಶಾನ್ಯ ರಾಜ್ಯಗಳ ಸಿಎಂ ಜೊತೆ ಅಮಿತ್ ಶಾ ಸಭೆ; ಗಡಿ ವಿವಾದಗಳ ಚರ್ಚೆ ಸಾಧ್ಯತೆ!

ಜುಲೈ 17ರಂದು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದು ಈ ಸಂದರ್ಭದಲ್ಲಿ ಅಂತರರಾಜ್ಯ ಗಡಿ ವಿವಾದಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ತಿಳಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಶಿಲ್ಲಾಂಗ್: ಜುಲೈ 17ರಂದು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದು ಈ ಸಂದರ್ಭದಲ್ಲಿ ಅಂತರರಾಜ್ಯ ಗಡಿ ವಿವಾದಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಭಾಗವಹಿಸಲಿದ್ದಾರೆ ಎಂದರು. 

ಜುಲೈ 17ರಂದು ತಾತ್ಕಾಲಿಕವಾಗಿ ಇಲ್ಲಿನ ಕನ್ವೆನ್ಷನ್ ಹಾಲ್ನಲ್ಲಿ ಈಶಾನ್ಯ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸುವುದಾಗಿ ಕೇಂದ್ರ ಗೃಹ ಸಚಿವರು ತಮಗೆ ಮಾಹಿತಿ ನೀಡಿದ್ದಾರೆ ಎಂದು ಸಂಗ್ಮಾ ಸುದ್ದಿಗಾರರಿಗೆ ತಿಳಿಸಿದರು.

ಆಗಸ್ಟ್ 15ರ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜ್ಯಗಳ ನಡುವಿನ ಅಂತರರಾಜ್ಯ ಸಮಸ್ಯೆಗಳನ್ನು ಬಗೆಹರಿಸಬೇಕೆಂಬುದು ಕೇಂದ್ರದ ಉದ್ದೇಶವಾಗಿದೆ ಎಂದು ಸಂಗ್ಮಾ ಹೇಳಿದರು.

50 ವರ್ಷಗಳಿಂದ ಗಡಿ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ನಮಗೆ ಸಾಧ್ಯವಾಗಲಿಲ್ಲ, ಪ್ರಸ್ತುತ, ಈಶಾನ್ಯದ ರಾಜ್ಯಗಳಲ್ಲಿ ರಾಜಕೀಯ ತಿಳುವಳಿಕೆ ಇದೆ. ನಾವು ಈ ವಿಷಯವನ್ನು ಉನ್ನತ ಮಟ್ಟದಲ್ಲಿ ಚರ್ಚಿಸಬಹುದು ಎಂದು ಸಂಗ್ಮಾ ಹೇಳಿದರು.

ಶಾ ಅವರು ಎರಡು ದಿನಗಳ ಭೇಟಿಗಾಗಿ ಮೇಘಾಲಯಕ್ಕೆ ಆಗಮಿಸಲಿದ್ದಾರೆ. ಇಲ್ಲಿಗೆ ಸಮೀಪವಿರುವ ಈಶಾನ್ಯ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರ(ಎನ್‌ಇಎಸಿ) ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಸಂಗ್ಮಾ ಹೇಳಿದರು.

ಕೇಂದ್ರ ಸಚಿವರು ರಾಜ್ಯದಲ್ಲಿ ಕೆಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com