ಲಖನೌ: ಇಬ್ಬರು ಶಂಕಿತ ಉಗ್ರರ ಬಂಧನ

ಉತ್ತರ ಪ್ರದೇಶ ರಾಜಧಾನಿ ಲಖನೌನ ಕಾಕೊರಿ ಪ್ರದೇಶದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹ ಪೊಲೀಸರು ಭಾನುವಾರ ಬಂಧಿಸಿರುವುದಾಗಿ ಪೊಲೀಸರು ಮೂಲಗಳು ತಿಳಿಸಿವೆ. ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಸ್ಫೋಟಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಉತ್ತರ ಪ್ರದೇಶ ರಾಜಧಾನಿ ಲಖನೌನ ಕಾಕೊರಿ ಪ್ರದೇಶದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹ ಪೊಲೀಸರು ಭಾನುವಾರ ಬಂಧಿಸಿರುವುದಾಗಿ ಪೊಲೀಸರು ಮೂಲಗಳು ತಿಳಿಸಿವೆ. ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಸ್ಫೋಟಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
 
ರಾಜ್ಯದಲ್ಲಿ ದೊಡ್ಡ ಮಟ್ಟದ ಅಪರಾಧ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಭಯೋತ್ಪಾದಕ ನಿಗ್ರಹ ಪೊಲೀಸರು ಶಂಕಿತ ಉಗ್ರರಿಂದ ಮಾಹಿತಿ ಪಡೆದಿದ್ದಾರೆ. ಬಂಧಿತ ವ್ಯಕ್ತಿಗಳು ಗಡಿಯುದ್ದಕ್ಕೂ ಜನರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ಹೇಳಿವೆ.

ಕಾಕೋರಿಯ ಫರೀದಿಪುರದಲ್ಲಿ ಇಬ್ಬರು ಶಂಕಿತರಿರುವ ಮಾಹಿತಿಯ ಮೇರೆಗೆ ಎಟಿಎಸ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.ಎಟಿಎಸ್ ಕಮಾಂಡೋಗಳು ಮತ್ತು ಬಾಂಬ್ ನಿಷ್ಕ್ರೀಯ ದಳ ಅಲ್ಲಿವೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಉಗ್ರರ ಚಲನವಲನಗಳ ಬಗ್ಗೆ ಎಟಿಎಸ್ ಗೆ ಮಾಹಿತಿ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com